ವಿದೇಶ

ಡೊನಾಲ್ಡ್ ಟ್ರಂಪ್ ಕ್ರೈಸ್ತರಲ್ಲ: ಪೋಪ್ ಫ್ರಾನ್ಸಿಸ್

ರಿಪಬ್ಲಿಕನ್ ಪಕ್ಷದಿಂದ ಅಮೆರಿಕ ಅಧ್ಯಕ್ಷೀಯ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿರುವ ಡೊನಾಲ್ಡ್ ಟ್ರಂಪ್ ವಿರುದ್ಧ ಪೋಪ್ ಫ್ರಾನ್ಸಿಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಕ್ರೈಸ್ತರಲ್ಲ: ಪೋಪ್ ಫ್ರಾನ್ಸಿಸ್
ಪೋಪ್ ಫ್ರಾನ್ಸಿಸ್
Published On :

ಮೆಕ್ಸಿಕೋ: ರಿಪಬ್ಲಿಕನ್ ಪಕ್ಷದಿಂದ ಅಮೆರಿಕ ಅಧ್ಯಕ್ಷೀಯ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿರುವ ಡೊನಾಲ್ಡ್ ಟ್ರಂಪ್ ವಿರುದ್ಧ ಪೋಪ್ ಫ್ರಾನ್ಸಿಸ್ ಅಸಮಾಧಾನ ವ್ಯಕ್ತಪಡಿಸಿದ್ದು, ದಾಖಲೆ ರಹಿತ ವಲಸೆಗಾರರನ್ನು ಹೊರಕಳಿಸುವುದು ಹಾಗೂ ಯುಎಸ್ ಮೆಕ್ಸಿಕೋ ನಡುವೆ ಕಂದಕ ಉಂಟುಮಾಡಲು ಯತ್ನಿಸುವವರು ಕ್ರೈಸ್ತರಲ್ಲ ಎಂದು ಹೇಳಿದ್ದಾರೆ.
ಮೆಕ್ಸಿಕೋದಿಂದ ರೋಮ್ ಗೆ ವಾಪಸ್ಸಾಗುತ್ತಿದ್ದ ವೇಳೆ ಈ ಹೇಳಿಕೆ ನೀಡಿರುವ ಪೋಪ್ ಫ್ರಾನ್ಸಿಸ್, ಅಮೆರಿಕದ ದಕ್ಷಿಣದಲ್ಲಿ ಉಂಟಾಗಿರುವ ಬಿಕ್ಕಟ್ಟುನ್ನು ನಿರ್ವಹಿಸಲು ಅಮೆರಿಕಾಗೆ ಕರೆ ನೀಡಿದ್ದಾರೆ. ಆದರೆ ನೇರವಾಗಿ ಡೊನಾಲ್ಡ್ ಟ್ರಂಪ್ ಗೆ ಮತ ಹಾಕಬೇಡಿ ಎಂದು ಹೇಳಿಲ್ಲ.
ಅಮೆರಿಕಾಗೆ ಅಕ್ರಮವಾಗಿ ವಲಸೆ ಬರುತ್ತಿರುವವರನ್ನು ತಡೆಗಟ್ಟುವ ಡೊನಾಲ್ಡ್ ಟ್ರಂಪ್ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಪೋಪ್ ಡೊನಾಲ್ಡ್ ಟ್ರ್ಂಪ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು ಸಮಾಜದಲ್ಲಿ ಕಂದಕ ಉಂಟು ಮಾಡಲು ಯತ್ನಿಸುತ್ತಿರುವವರು ಪ್ರಪಂಚದ ಯಾವುದೇ ಭಾಗದಲ್ಲಿದ್ದರೂ ಕ್ರೈಸ್ತರಾಗಲು ಸಾಧ್ಯವಿಲ್ಲ ಎಂದಿದ್ದಾರೆ.  
ಪೋಪ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡೊನಾಲ್ಡ್ ಟ್ರಂಪ್ ಪೋಪ್ ಫ್ರಾನ್ಸಿಸ್ ಹೇಳಿಕೆ ಅಪಮಾನಕಾರಿಯಾಗಿದೆ ಎಂದು ಹೇಳಿದ್ದಾರೆ. ಮೆಕ್ಸಿಕೋದ ಸರ್ಕಾರ ನನ್ನ ಬಗ್ಗೆ ಪೋಪ್ ಗೆ ತಪ್ಪು ಮಾಹಿತಿ ನೀಡಿದೆ ಎಂದು ಟ್ರಂಪ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.