ಮಾರ್ಚ್ ನಲ್ಲಿ ಪ್ರಧಾನಿ ಮೋದಿ- ಷರೀಫ್ ಭೇಟಿ ಸಾಧ್ಯತೆ
ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಮಾರ್ಚ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಮಾರ್ಚ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಅಮೆರಿಕ ಆಯೋಜಿಸಿರುವ ಪರಮಾಣು ಶೃಂಗಸಭೆಯಲ್ಲಿ ಭಾಗವಹಿಸಲಿರುವ ಉಭಯ ನಾಯಕರು ಭೇಟಿ ಮಾಡಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮಾರ್ಚ್.31 , ಏಪ್ರಿಲ್-1 ರಂದು ನಡೆಯಲಿರುವ ಪರಮಾಣು ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ, ನವಾಜ್ ಷರೀಫ್ ಬರಾಕ್ ಒಬಾಮ ಅವರ ಆಹ್ವಾನಕ್ಕೆ ಒಪ್ಪಿದ್ದಾರೆ.
ಶೃಂಗಸಭೆಯ ನಂತರ ನರೇಂದ್ರ ಮೋದಿ- ಷರೀಫ್ ಭೇಟಿ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂದು ಪಾಕ್ ಪತ್ರಿಕೆ ಡಾನ್ ವರದಿ ಮಾಡಿದೆ. ಆದರೆ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ಇತಿಹಾಸ ಮೇಲುಕುಹಾಕುವುದಾದರೆ ಯಾವುದನ್ನೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಅಮೆರಿಕದಲ್ಲಿ ನಡೆಯುತ್ತಿರುವ ಪರಮಾಣು ಶೃಂಗಸಭೆಯಲ್ಲಿ 2010 ರ ನಂತರ ಇದೇ ಮೊದಲ ಬಾರಿಗೆ ಭಾರತ, ಪಾಕಿಸ್ತಾನ ಪ್ರಧಾನಿಗಳು ಒಟ್ಟಿಗೆ ಭಾಗವಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


