ವಿದೇಶ

ಭಾರತ- ಪಾಕಿಸ್ತಾನ ಸಿಯಾಚಿನ್ ನಿಂದ ಸೇನಾ ಪಡೆ ವಾಪಸ್ ಕರೆಸಿಕೊಳ್ಳಬಹುದು: ಸರ್ತಾಜ್ ಅಜೀಜ್

ಸಿಯಾಚಿನ್ ಪ್ರದೇಶದಲ್ಲಿ ಉಭಯ ದೇಶಗಳ ಸೇನಾ ಪಡೆಯನ್ನು ವಾಪಸ್ ಕರೆಸಿಕೊಳ್ಳುವುದನ್ನು ಪಾಕಿಸ್ತಾನ ಬೆಂಬಲಿಸುತ್ತದೆ- ಸರ್ತಾಜ್ ಅಜೀಜ್

ಭಾರತ- ಪಾಕಿಸ್ತಾನ ಸಿಯಾಚಿನ್ ನಿಂದ ಸೇನಾ ಪಡೆ ವಾಪಸ್ ಕರೆಸಿಕೊಳ್ಳಬಹುದು: ಸರ್ತಾಜ್ ಅಜೀಜ್
ಸರ್ತಾಜ್ ಅಜೀಜ್
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನ ಪ್ರಧಾನಿಯೊಂದಿಗೆ ಉತ್ತಮ ಸ್ನೇಹ ಹೊಂದಿದ್ದು ಪಾಕ್ ನೊಂದಿಗೆ ದ್ವಿಪಕ್ಷೀಯ ಸಂಬಂಧ ಸುಧಾರಣೆ ಮಾಡಲು ಮೋದಿ ಉತ್ಸುಕರಾಗಿರುವುದು ಕಾಣುತ್ತಿದೆ ಎಂದು ಪಾಕ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.
ಮೋದಿ- ಷರೀಫ್ ಪರಸ್ಪರ ವಿಶ್ವಾಸದಿಂದಿದ್ದಾರೆ. ಪಾಕಿಸ್ತಾನಕ್ಕೆ ನರೇಂದ್ರ ಮೋದಿ ಅವರು ದಿಢೀರ್ ಭೇಟಿ ನೀಡಿದ್ದಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಹಂತದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆಗೆ ಅಡ್ಡಿಯುಂತಾಗುವುದಕ್ಕೆ ಅವಕಾಶ ನೀಡಬಾರದು ಎಂದು ಇಂಡಿಯಾ ಟುಡೆ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಸರ್ತಾಜ್ ಅಜೀಜ್ ಅಭಿಪ್ರಾಯಪಟ್ಟಿದ್ದಾರೆ.
ಸಿಯಾಚಿನ್ ಪ್ರದೇಶದಲ್ಲಿ ಉಭಯ ದೇಶಗಳ ಸೇನಾ ಪಡೆಯನ್ನು ವಾಪಸ್ ಕರೆಸಿಕೊಳ್ಳುವುದನ್ನು ಪಾಕಿಸ್ತಾನ ಬೆಂಬಲಿಸುತ್ತದೆ. ಅಲ್ಲದೇ ಈ ಬಗ್ಗೆ ಭಾರತದ ಮುಂದೆ ಪ್ರಸ್ತಾವನೆಯನ್ನು ಮುಂದಿಡಲಿದೆ ಎಂದು ಸರ್ತಾಜ್ ಅಜೀಜ್ ತಿಳಿಸಿದ್ದಾರೆ. ಭಾರತ-ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರರು ಪರಸ್ಪರ ನಿರಂತರ ಸಂಪರ್ಕದಲ್ಲಿದ್ದು ಸಿಯಾಚಿನ್ ಪ್ರದೇಶದಲ್ಲಿ ಸೇನಾ ಪಡೆ ವಾಪಸ್ ಪಡೆಯುವುದರ ಬಗ್ಗೆ ಉಭಯ ದೇಶಗಳು ನಿರ್ಧಾರ ಕೈಗೊಳ್ಳಬೇಕಿದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.