ಪಾಕಿಸ್ತಾನಕ್ಕೆ ಎಫ್-16 ಯುದ್ಧ ವಿಮಾನ ಪೂರೈಕೆ ನಿರ್ಧಾರವನ್ನು ಸಮರ್ಥಿಸಿಕೊಂಡ ಅಮೆರಿಕ
ಪಾಕಿಸ್ತಾನಕ್ಕೆ ಎಫ್-16 ಯುದ್ಧ ವಿಮಾನಗಳನ್ನು ಪೂರೈಕೆ ಮಾಡುವ ಕ್ರಮವನ್ನು ಅಮೆರಿಕದ ರಾಜ್ಯ ಇಲಾಖೆ ಸಮರ್ಥಿಸಿಕೊಂಡಿದೆ.

ವಾಷಿಂಗ್ ಟನ್: ಪಾಕಿಸ್ತಾನಕ್ಕೆ ಎಫ್-16 ಯುದ್ಧ ವಿಮಾನಗಳನ್ನು ಪೂರೈಕೆ ಮಾಡುವ ಕ್ರಮವನ್ನು ಅಮೆರಿಕದ ರಾಜ್ಯ ಇಲಾಖೆ ಸಮರ್ಥಿಸಿಕೊಂಡಿದೆ.
ಅಮೆರಿಕ ಪಾಕಿಸ್ತಾನಕ್ಕೆ ಪೂರೈಕೆ ಮಾಡಲಿರುವ ಎಫ್-16 ಯುದ್ಧ ವಿಮಾನಗಳು ಭಯೋತ್ಪಾದಕ ವಿರುದ್ಧ ನಡೆಯುವ ಕಾರ್ಯಾಚರಣೆಗೆ ನೆರವಾಗಲಿದೆ, ಆದ್ದರಿಂದ ಪಾಕಿಸ್ತಾನಕ್ಕೆ ಎಫ್-16 ಯುದ್ಧ ವಿಮಾನಗಳನ್ನು ಪೂರೈಕೆ ಮಾಡಲು ಅಮೆರಿಕ ಸಿದ್ಧವಿದೆ ಎಂದು ಅಮೆರಿಕ ವಕ್ತಾರೆ ಹೆಲೇನಾ ವೈಟ್ ಸ್ಪಷ್ಟಪಡಿಸಿದ್ದಾರೆ.
ಈ ವರೆಗೂ ಪಾಕಿಸ್ತಾನದ ಬಳಿ ಇರುವ ಎಫ್-16 ಯುದ್ಧ ವಿಮಾನಗಳು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಿಗೆ ಬಳಕೆಯಾಗಿದೆ. ಅಮೆರಿಕ ನೀಡುವ ಎಫ್-16 ಯುದ್ಧ ವಿಮಾನಗಳು ಸಹ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ಬಳಕೆಯಾಗಲಿವೆ ಎಂದು ಅಮೆರಿಕ ವಿಶ್ವಾಸ ವ್ಯಕ್ತಪಡಿಸಿದೆ.
ಪಾಕಿಸ್ತಾನಕ್ಕೆ ಪೂರೈಕೆಯಾಗುವ ಎಫ್-16 ಯುದ್ಧ ವಿಮಾನಗಳು ಭಾರತದ ವಿರುದ್ಧ ಬಳಕೆಯಾಗುವ ಸಾಧ್ಯತೆ ಇರುವುದರಿಂದ ಅಮೆರಿಕದ ಪ್ರಸ್ತಾವನೆಗೆ ಭಾರತ ಹಾಗೂ ಅಮೆರಿಕಾದ ಹಲವು ಸಂಸದರು ವಿರೋಧ ವ್ಯಕ್ತಪಡಿಸಿದ್ದರು. ವಿರೋಧದ ನಡುವೆಯೂ ಅಮೆರಿಕ ಪಾಕಿಸ್ತಾನಕ್ಕೆ ಎಫ್-16 ಯುದ್ಧ ವಿಮಾನಗಳನ್ನು ಪೂರೈಕೆ ಮಾಡುವ ಅಮೆರಿಕ ಸರ್ಕಾರದ ಕ್ರಮವನ್ನು ಅಮೆರಿಕಾದಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿ ಸ್ವಾಗತಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


