ವಿದೇಶ

ಫೆ.29 ರಂದು ಪಾಕಿಸ್ತಾನ- ಅಮೆರಿಕ ದ್ವಿಪಕ್ಷೀಯ ಮಾತುಕತೆ

ಪಾಕಿಸ್ತಾನ ಅಮೆರಿಕ ದ್ವಿಪಕ್ಷೀಯ ಮಾತುಕತೆ ಫೆ.29 ರಂದು ನಡೆಯಲಿದೆ.

ಫೆ.29 ರಂದು ಪಾಕಿಸ್ತಾನ- ಅಮೆರಿಕ ದ್ವಿಪಕ್ಷೀಯ ಮಾತುಕತೆ
ಪಾಕಿಸ್ತಾನ- ಅಮೆರಿಕ
Published On :

ಇಸ್ಲಾಮಾಬಾದ್: ಪಾಕಿಸ್ತಾನ ಅಮೆರಿಕ ದ್ವಿಪಕ್ಷೀಯ ಮಾತುಕತೆ  ಫೆ.29 ರಂದು ನಡೆಯಲಿದೆ. ಪಾಕ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಹಾಗೂ ಅಮೆರಿಕಾದ ಯುಎಸ್ ಕಾರ್ಯದರ್ಶಿ ಜಾನ್ ಕೆರ್ರಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಡೈಲಿ ಟೈಮ್ಸ್ ವರದಿ ಮಾಡಿದೆ.
ಪಾಕಿಸ್ತಾನದ ಆರ್ಥಿಕ ಬೆಳವಣಿಗೆ, ವ್ಯಾಪಾರ, ಪ್ರಾದೇಶಿಕ ಸ್ಥಿರತೆ, ಸಹಕಾರ ಮತ್ತು ಭಯೋತ್ಪಾದನಾ ನಿಗ್ರಹ ವಿಷಯ ದ್ವಿಪಕ್ಷೀಯ ಮಾತುಕತೆಯ ಕೇಂದ್ರಬಿಂದುವಾಗಿರಲಿದೆ.   
2015 ರಲ್ಲಿ ಇಸ್ಲಾಮಾಬಾದ್ ನಲ್ಲಿ ಈ ಹಿಂದಿನ ದ್ವಿಪಕ್ಷೀಯ ಮಾತುಕತೆ ನಡೆದಿತ್ತು. 2010 ರಲ್ಲಿ ಪ್ರಾರಂಭವಾಗಿದ್ದ ದ್ವಿಪಕ್ಷೀಯ ಮಾತುಕತೆ ಪ್ರಕ್ರಿಯೆ ಪ್ರಾರಂಭವಾಗಿತ್ತು. 2011  ರಲ್ಲಿ ಅಮೆರಿಕ ಅಲ್ ಖೈದಾ ಉಗ್ರ ಬಿನ್ ಲ್ಯಾಡನ್ ನನ್ನು ಹತ್ಯೆ ಮಾಡಿದ್ದ ನಂತರ ಪಾಕ್- ಅಮೆರಿಕ ದ್ವಿಪಕ್ಷೀಯಮಾತುಕತೆಗೆ ಅಡ್ಡಿ ಉಂಟಾಗಿತ್ತು. ಮತ್ತೆ 2014 ರಲ್ಲಿ ದ್ವಿಪಕ್ಷೀಯ ಮಾತುಕತೆ ಪ್ರಕ್ರಿಯೆ ಪ್ರಾರಂಭವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.