ವಿದೇಶ

ಪ್ರಧಾನಿ ಮೋದಿ ದಿಢೀರ್ ಪಾಕ್ ಭೇಟಿ ಪ್ರಶ್ನಿಸಿ ಲಾಹೋರ್ ಹೈಕೋರ್ಟ್‌ನಲ್ಲಿ ಅರ್ಜಿ

ಪಾಕಿಸ್ತಾನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ಭೇಟಿ ನೀಡಿದ್ದನ್ನು ಪ್ರಶ್ನಿಸಿ ಮುನೀರ್ ಅಹಮದ್...

ಪ್ರಧಾನಿ ಮೋದಿ ದಿಢೀರ್ ಪಾಕ್ ಭೇಟಿ ಪ್ರಶ್ನಿಸಿ ಲಾಹೋರ್ ಹೈಕೋರ್ಟ್‌ನಲ್ಲಿ ಅರ್ಜಿ
ನವಾಜ್ ಷರೀಫ್ -ನರೇಂದ್ರ ಮೋದಿ
Published On :
ನವದೆಹಲಿ:  ಪಾಕಿಸ್ತಾನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ಭೇಟಿ ನೀಡಿದ್ದನ್ನು ಪ್ರಶ್ನಿಸಿ ಮುನೀರ್ ಅಹಮದ್ ಎಂಬುವವರು ಲಾಹೋರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಡಿಸೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿ, ಪಾಕ್ ಪ್ರಧಾನಿ ನವಾಜ್ ಷರೀಫ್ ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ್ದರು. ಅಷ್ಟೇ ಅಲ್ಲದೇ, ಷರೀಫ್ ಅವರ ನಿವಾಸದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು.
ಈ ಹಿನ್ನಲೆಯಲ್ಲಿ ಮುನೀರ್ ಅಹಮದ್ ಎಂಬುವವರು ನ್ಯಾಯವಾದಿ ಅಝರ್ ಸಿದ್ದೀಕ್ ಎಂಬುವವರ ಮೂಲಕ ದಾವೆ ದಾಖಲಿಸಿದ್ದು, ಅಧಿಕೃತ ಅನುಮತಿಯಿಲ್ಲದೆ ಮೋದಿ ಮತ್ತು ಅವರ ತಂಡ, 120 ಮಂದಿಯ ನಿಯೋಗ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ. 
ಭಾರತದ ಪ್ರಧಾನಿ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದಾರೆ ಎಂಬ ಯಾವುದೇ ಮಾಹಿತಿ ನೀಡದೆಯೇ, ದಿಢೀರ್ ಭೇಟಿ ನೀಡಲಾಗಿದೆ. ಸಾಮಾಜಿಕ ಜಾಲ ತಾಣದ ಮೂಲಕ ಈ ಮಾಹಿತಿ ಬಹಿರಂಗವಾಗಿದೆ. ಈ ನಿಟ್ಟಿನಲ್ಲಿ ಕಾನೂನನ್ನು ಮತ್ತು ಆಂತರಿಕ ಸಚಿವಾಲಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.