ಇರಾಕ್: ಆತ್ಮಾಹುತಿ ಬಾಂಬ್ ದಾಳಿಗೆ 15 ಮಂದಿ ಸಾವು
ಇರಾಕ್ ನಲ್ಲಿ ಉಗ್ರರ ದುಷ್ಕೃತ್ಯ ಮುಂದುವರೆದಿದ್ದು, ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 13 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ...

ಬಾಗ್ದಾದ್: ಇರಾಕ್ ನಲ್ಲಿ ಉಗ್ರರ ದುಷ್ಕೃತ್ಯ ಮುಂದುವರೆದಿದ್ದು, ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 13 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಇರಾಕ್ ನ ಸಲಾಹುದ್ದಿನ್ ಪ್ರಾಂತ್ಯದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಈ ದಾಳಿ ನಡೆದಿದ್ದು, ಆತ್ಮಾಹುತಿ ಬಾಂಬರ್ಗಳು 13 ಜನ ತರಬೇತಿಯಲ್ಲಿದ್ದ ಪೊಲೀಸರನ್ನು ಕೊಂದು ಹಾಕಿದ್ದಾರೆ. ಘಟನೆಯಲ್ಲಿ ಇನ್ನೂ 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶನಿವಾರ ರಾತ್ರಿ ಬೆಲ್ಟ್ ಬಾಂಬ್ಗಳನ್ನು ಕಟ್ಟಿಕೊಂಡಿದ್ದ 3 ಜನ ಉಗ್ರರು ಇರಾಕಿನ ಮುಖ್ಯ ವಾಯುನೆಲೆಗೆ ಏಕಾಏಕಿ ನುಸುಳಿ ತಮ್ಮನ್ನು ತಾವು ಸ್ಪೋಟಿಸಿಕೊಂಡಿದ್ದಾರೆ ಎಂದು ಖ್ಯಾತ ಸುದ್ದಿಸಂಸ್ಥೆ ಭಾನುವಾರ ವರದಿ ಮಾಡಿದೆ. ಅಲ್ಲದೆ ಉಗ್ರರ ವಶದಲ್ಲಿರುವ ನೈನ್ವೇ ಪ್ರಾಂತ್ಯವನ್ನು ಮರು ವಶಕ್ಕೆ ಪಡೆಯಲು ಇರಾಕ್ ಸರ್ಕಾರ ಪ್ರಯತ್ನಿಸಿತ್ತು. ಇದಕ್ಕಾಗಿ ಈ ಕ್ಯಾಂಪ್ನಲ್ಲಿ ಸಿದ್ಧತೆ ನಡೆಸಲಾಗುತ್ತಿತ್ತು. ಇದನ್ನು ತಡೆಯಲೆಂದೇ ಉಗ್ರರು ಈ ದಾಳಿ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


