ಚೀನಾದಲ್ಲಿ "ಎಲ್ಲೋ ಅಲರ್ಟ್"; ಮುಂದುವರೆದ ಅಲರ್ಟ್ ಸರಣಿ
ಚೀನಾ ರಾಜಧಾನಿ ಬೀಜಿಂಗ್ ನಲ್ಲಿ ವಾಯುಮಾಲಿನ್ಯ ಪ್ರಮಾಣ ಮಿತಿ ಮೀರಿದ್ದು, ಚೀನಾ ಸರ್ಕಾರ ಭಾನುವಾರ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ...

ಬೀಜಿಂಗ್: ಚೀನಾ ರಾಜಧಾನಿ ಬೀಜಿಂಗ್ ನಲ್ಲಿ ವಾಯುಮಾಲಿನ್ಯ ಪ್ರಮಾಣ ಮಿತಿ ಮೀರಿದ್ದು, ಚೀನಾ ಸರ್ಕಾರ ಭಾನುವಾರ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಚೀನಾದಲ್ಲಿ ವಾಯು ಮಾಲಿನ್ಯದ ಎಚ್ಚರಿಕೆಯನ್ನು 4 ವಿಭಾಗಗಳಾಗಿ ವಿಂಗಡಿಸಿದ್ದು, ರೆಡ್ ಅಲರ್ಟ್ ಅತಿ ಕೆಟ್ಟ ವಾತಾವರಣದ ಮುನ್ಸೂಚನೆಯಾಗಿದೆ. ನಂತರ ಆರೆಂಜ್, ಎಲ್ಲೋ ಮತ್ತು ಬ್ಲೂ ಅಲರ್ಟ್ಗಳಿವೆ. ನಿನ್ನೆ ಆರೆಂಜ್ ಆಲರ್ಟ್ ಘೋಷಣೆ ಮಾಡಿದ್ದ ಚೀನಾ ಸರ್ಕಾರ ಇಂದು ಅದಕ್ಕಿಂತಲೂ ಹೆಚ್ಚು ಅಂದರೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಹವಾಮಾನ ಇಲಾಖೆಯ ಮೂಲಗಳ ಪ್ರಕಾರ ಸೋಮವಾರವೂ ಪರಿಸ್ಥಿತಿ ಹೀಗೆ ಮುಂದುವರಿಯಲಿದ್ದು, ಮನೆಯಿಂದ ಹೊರಗೆ ಬರದಂತೆ ಮತ್ತು ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಹಲವು ನಗರಗಳಲ್ಲಿ ಎಚ್ಚರಿಕೆ ರವಾನಿಸಲಾಗಿದೆ.
ಬೀಜಿಂಗ್ ನ ಕೆಲ ಪ್ರಮುಖ ಪ್ರದೇಶಗಳೂ ಸೇರಿದಂತೆ ಚೀನಾದ ಕೆಲವು ನಗರಗಳಲ್ಲಿ ಕಳೆದ ರಾತ್ರಿ ‘ರೆಡ್ ಅಲರ್ಟ್’ ಘೋಷಣೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


