ಲಿಬಿಯಾ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಬಾಂಬ್ ದಾಳಿ: 50 ಸಾವು
ಪಶ್ಚಿಮ ಲಿಬಿಯಾದ ಝ್ಲಿಟೆನ್ ನಗರದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಉಗ್ರರು ಟ್ರಕ್ ಬಾಂಬ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 50 ಮಂದಿ ...

Published On :
ಟ್ರಿಪೋಲಿ: ಪಶ್ಚಿಮ ಲಿಬಿಯಾದ ಝ್ಲಿಟೆನ್ ನಗರದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಉಗ್ರರು ಟ್ರಕ್ ಬಾಂಬ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 50 ಮಂದಿ ಮೃತಪಟ್ಟಿದ್ದಾರೆ ಮತ್ತು 127ಕ್ಕೂ ಮಂದಿ ಗಾಯಗೊಂಡಿದ್ದಾರೆ.
ಲಿಬಿಯಾ ರಾಜಧಾನಿ ಟ್ರಿಪೋಲಿಯಿಂದ ಸುಮಾರು 160 ಕಿ.ಮೀ. ದೂರದಲ್ಲಿರುವ ಝ್ಲಿಟೆನ್ ನಗರದಲ್ಲಿ ಈ ಪೊಲೀಸ್ ತರಬೇತಿ ಕೇಂದ್ರದಲ್ಲಿ ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ನೇಮಕಾತಿ ನಡೆಯುತ್ತಿದ್ದ ವೇಳೆ ಉಗ್ರರು ಸ್ಫೋಟಕ ತುಂಬಿದ ಟ್ರಕ್ ಅನ್ನು ಕ್ಯಾಂಪ್ ಗೆ ನುಗ್ಗಿಸಿ ಸ್ಫೋಟಿಸಿದ್ದಾರೆ.
ಈ ದಾಳಿಯ ಹೊಣೆಯನ್ನು ಇದುವರೆಗೂ ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ. ಆದರೆ ಈ ಐಎಸ್ಐಎಸ್ ಉಗ್ರರೇ ಈ ದಾಳಿ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


