ಅಜರ್ ಬಂಧನ ಯಾವತ್ತೂ ಸಾಧ್ಯವಿಲ್ಲ; ಬಂಧನವಾದರೂ ಏನು ವ್ಯತ್ಯಾಸವಾಗುವುದಿಲ್ಲ: ಪಾಕ್, ಭಾರತಕ್ಕೆ ಜೈಶ್ ತಿರುಗೇಟು
ಪಠಾಣ್ ಕೋಟ್ ವಾಯುನೆಲೆ ದಾಳಿಯ ರೂವಾರಿ, ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್...

ಇಸ್ಲಾಮಾಬಾದ್: ಪಠಾಣ್ ಕೋಟ್ ವಾಯುನೆಲೆ ದಾಳಿಯ ರೂವಾರಿ, ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಬಂಧನ ಯಾವತ್ತೂ ಸಾಧ್ಯವಿಲ್ಲ, ಒಂದು ವೇಳೆ ಬಂಧಿತನಾದರೂ ಅದರಿಂದ ನಮಗೆ ಏನೂ ವ್ಯತ್ಯಾಸವಾಗುವುದಿಲ್ಲ ಎಂದು ಜೈಶ್ ಇ ಮೊಹಮ್ಮದ್ ಸಂಘಟನೆ ಹೇಳಿದೆ.
ಮಸೂದ್ ನಮ್ಮ ಕಸ್ಟಡಿಯಲ್ಲಿದ್ದಾನೆ ಎಂದು ಪಂಜಾಬ್ ಕಾನೂನು ಸಚಿವ ರಾಣಾ ಸನಾವುಲ್ಲಾ ಹೇಳಿದ್ದರೆ, ಮತ್ತೊಂದೆಡೆ ನಮ್ಮ ಸಂಘಟನೆಯ ವರಿಷ್ಠನ ಬಂಧನ ಯಾವತ್ತೂ ಸಾಧ್ಯವಿಲ್ಲ ಎಂದು ಜೈಶ್ ಹೇಳುವ ಮೂಲಕ ಅಜರ್ ಬಂಧನದ ಗೊಂದಲ ಮುಂದುವರಿದಿದೆ.
ನಮ್ಮ ಸಂಘಟನೆಯ ಮುಖ್ಯಸ್ಥನ ಬಂಧನವಾಗಿದೆ ಎಂಬ ಸುದ್ದಿ ಕೇಳಿ ಹಲವರು ಸಂಭ್ರಮಿಸಿರಬಹುದು. ಆದರೆ ಮಸೂದ್ ಬಂಧನ ಯಾವತ್ತೂ ಸಾಧ್ಯವಿಲ್ಲ ಎಂದು ಘೋಷಿಸಿರುವುದಾಗಿ ದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


