ಪ್ರಕ್ಷುಬ್ಧತೆ ತಿಳಿಗೊಳಿಸಲು ಇರಾನ್ ಮತ್ತು ಸೌದಿಗೆ ಭೇಟಿ ನೀಡಲಿರುವ ಪಾಕಿಸ್ತಾನ ಪ್ರಧಾನಿ
ಸೌದಿ ಅರೇಬಿಯಾ ಮತ್ತು ಇರಾನ್ ದೇಶಗಳ ನಡುವಿನ ಪ್ರಕ್ಷುಬ್ಧತೆಯನ್ನು ತಿಳಿಗೊಳಿಸಲು ಎರಡು ದೇಶಗಳಿಗೆ ಪಾಕಿಸ್ತಾನಿ ಪ್ರಧಾನಿ ನವಾಜ್ ಶರೀಫ್ ಭೇಟಿ ನೀಡಿ ಮಾತುಕತೆ

ಇಸ್ಲಮಾಬಾದ್: ಸೌದಿ ಅರೇಬಿಯಾ ಮತ್ತು ಇರಾನ್ ದೇಶಗಳ ನಡುವಿನ ಪ್ರಕ್ಷುಬ್ಧತೆಯನ್ನು ತಿಳಿಗೊಳಿಸಲು ಎರಡು ದೇಶಗಳಿಗೆ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಭೇಟಿ ನೀಡಿ ಮಾತುಕತೆ ನಡೆಸಲಿದ್ದಾರೆ.
ಜನವರಿ ೧೮ ಮತ್ತು ೧೯ ರಂದು ಸೌದಿ ಅರೇಬಿಯಾ ಮತ್ತು ಇರಾನ್ ಗೆ ತೆರಳಲಿರುವ ಉನ್ನತ ಮಟ್ಟದ ನಿಯೋಗವನ್ನು ನವಾಜ್ ಶರೀಫ್ ಮುನ್ನಡೆಸಲಿದ್ದಾರೆ ಎಂದು ವಿದೇಶಾಂಗ ಕಾರ್ಯಾಲಯದ ಅಧಿಕೃತ ಹೇಳಿಕೆ ತಿಳಿಸಿದೆ.
ನವಾಜ್ ಶರೀಫ್ ರಿಯಾದ್ ನಿಂದ ಟೆಹ್ರಾನ್ ಗೆ ನೇರವಾಗಿ ತೆರಳಲಿದ್ದಾರೆಯೇ ಅಥವಾ ಪ್ರತ್ಯೇಕವಾಗಿ ಇರಾನ್ ಗೆ ಭೇಟಿ ನೀಡಲಿದ್ದಾರೆಯೇ ಎಂಬುದನ್ನು ಹೇಳಿಕೆ ಸ್ಪಷ್ಟೀಕರಿಸಿಲ್ಲ.
ಇರಾನ್ ಮತ್ತು ಸೌದಿ ಅರೇಬಿಯಾ ದೇಶಗಳ ನಡುವೆ ಹೆಚ್ಚಿರುವ ಉದ್ವಿಗ್ನತೆ ಪಾಕಿಸ್ತಾನಕ್ಕೆ ಕಳವಳ ತಂದಿದೆ ಎಂದು ವಿದೇಶಾಂಗ ಕಾರ್ಯಾಲಯದ ಹೇಳಿಕೆ ತಿಳಿಸಿದೆ.
ಸೌದಿ ಅರೇಬಿಯಾ ರಾಯಭಾರಿ ಕಚೇರಿಯ ಎದುರು ನಡೆದ ಪ್ರತಿಭಟನೆಗಳಿಂದಾಗಿ ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ರಿಯಾದ್ ಕಳೆದುಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


