ಭಾರತ ಉತ್ತಮ ಕೆಲಸ ಮಾಡುತ್ತಿದೆ; ಆದರೆ ಆ ಬಗ್ಗೆ ಯಾರೂ ಮಾತನಾಡುತ್ತಿಲ್ಲ: ಡೊನಾಲ್ಡ್ ಟ್ರಂಪ್
ಭಾರತ ದೇಶ ಉತ್ತಮವಾದ ಕೆಲಸ ಮಾಡುತ್ತಿದೆ, ಆದರೆ ಆ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್...

ವಾಷಿಂಗ್ಟನ್: ಭಾರತ ದೇಶ ಉತ್ತಮವಾದ ಕೆಲಸ ಮಾಡುತ್ತಿದೆ, ಆದರೆ ಆ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧಿಯಾಗಿ ಘೋಷಣೆಯಾದ ನಂತರ ಅವರು ಭಾರತ ದೇಶದ ಬಗ್ಗೆ ಮೊದಲ ಸಲ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ತಮ್ಮ ನೇರ,ನಿಷ್ಠುರ ಹೇಳಿಕೆಗಳಿಗೆ ಹೆಸರಾಗಿರುವ ಟ್ರಂಪ್ ಈಗಾಗಲೇ ತಮ್ಮ ಭಾಷಣದಲ್ಲಿ ಚೀನಾ, ಮೆಕ್ಸಿಕೋ, ಜಪಾನ್ ನ ಬಗ್ಗೆ ಸಾರ್ವಜನಿಕವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಅಂದು ಭಾರತ ಸೇರಿದಂತೆ ಚೀನಾ, ಜಪಾನ್, ಇರಾನ್, ಇರಾಕ್ ದೇಶಗಳಿಗೆ ಪ್ರಗತಿಯ ಆರಂಭದ ದಿನಗಳಾಗಿದ್ದವು. ಸೆಪ್ಟೆಂಬರ್ 2007ರಲ್ಲಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಮಾತುಗಳನ್ನು ಹೇಳಿದ್ದೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಭಾರತ ನಿಜಕ್ಕೂ ಅಭಿವೃದ್ಧಿ ಹೊಂದುತ್ತಿದೆ. ಆದರೆ ಅದನ್ನು ಯಾರೂ ಗುರುತಿಸುತ್ತಿಲ್ಲ. ಆದರೆ ಅಮೆರಿಕ ದೇಶ ಪ್ರಗತಿ, ಸಾಧನೆಯಲ್ಲಿ ಕುಂಠಿತಗೊಂಡಿದೆ. ಇದು ನಿಜಕ್ಕೂ ಬೇಸರದ ಸಂಗತಿ. ನಮಗೆ ಮೊದಲಿನಂತೆ ಗೌರವ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


