ವಿದೇಶ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಅರ್ಚಕನ ಮೇಲೆ ಹಲ್ಲೆ, ಸ್ಥಿತಿ ಗಂಭೀರ

ಮುಸ್ಲಿಂ ರಾಷ್ಟ್ರವಾಗಿರುವ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿಗಳು ಸಾಮಾನ್ಯವಾಗಿದೆ. ಎರಡು ದಿನಗಳ ಹಿಂದಷ್ಟೇ ಬಾಂಗ್ಲಾದಲ್ಲಿ ಹಿಂದೂ ಅರ್ಚಕನ...

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಅರ್ಚಕನ ಮೇಲೆ ಹಲ್ಲೆ, ಸ್ಥಿತಿ ಗಂಭೀರ
ಹಿಂದೂ ಅರ್ಚಕ
Published On :
ಢಾಕಾ: ಮುಸ್ಲಿಂ ರಾಷ್ಟ್ರವಾಗಿರುವ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿಗಳು ಸಾಮಾನ್ಯವಾಗಿದೆ. ಎರಡು ದಿನಗಳ ಹಿಂದಷ್ಟೇ ಬಾಂಗ್ಲಾದಲ್ಲಿ ಹಿಂದೂ ಅರ್ಚಕನ ಕೊಲೆ ಮಾಡಿದ್ದ ಉಗ್ರರು ಮತ್ತೋರ್ವ ಹಿಂದೂ ಅರ್ಚಕನ ಮೇಲೆ ಹಲ್ಲೆ ಮಾಡಿದ್ದಾರೆ. 
ಉಗ್ರರ ಹಲ್ಲೆಯಿಂದಾಗಿ ನೈಋತ್ಯ ಬಾಂಗ್ಲಾದ ಸಖ್ತಿರಾ ಜಿಲ್ಲೆಯಲ್ಲಿರುವ ರಾಧಾ ಗೋವಿಂದ ದೇವಾಲಯದ 48ರ ಹರೆಯದ ಬಾಬಾ ಸಿಂಧುರಾಯ್ ಸ್ಥಿತಿ ಗಂಭೀರವಾಗಿದೆ. 
ಅರ್ಚಕನ ಎದೆಯ ಭಾಗಕ್ಕೆ ಬಲವಾದ ಏಟು ಬಿದ್ದಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಬಾಬಾ ಸಿಂಧುರಾಯ್ ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಶಂಕಿತ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಕಾರ್ಯಕರ್ತರೇ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.