ವಿದೇಶ

ಢಾಕಾ ಕಾರ್ಯಾಚರಣೆ ಅಂತ್ಯ: ಉಗ್ರ ದಾಳಿಗೆ 20 ವಿದೇಶಿಯರು ಬಲಿ

ಢಾಕಾದ ಆರ್ಟಿಸನ್ ರೆಸ್ಟೋರೆಂಟ್ ನಲ್ಲಿ ವಿದೇಶಿ ನಾಗರಿಕರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಬಾಂಗ್ಲಾದೇಶ ಭದ್ರತಾ...

ಢಾಕಾ ಕಾರ್ಯಾಚರಣೆ ಅಂತ್ಯ: ಉಗ್ರ ದಾಳಿಗೆ 20 ವಿದೇಶಿಯರು ಬಲಿ
ಬಾಂಗ್ಲಾ ಸೇನಾ ಪಡೆಯ ಕಾರ್ಯಾಚರಣೆ
Published On :
ಢಾಕಾ: ಢಾಕಾದ ಆರ್ಟಿಸನ್ ರೆಸ್ಟೋರೆಂಟ್ ನಲ್ಲಿ ವಿದೇಶಿ ನಾಗರಿಕರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಬಾಂಗ್ಲಾದೇಶ ಭದ್ರತಾ ಪಡೆ ಯೋಧರು ಅಂತ್ಯಗೊಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ 6 ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವ ಉಗ್ರನನ್ನು ಜೀವಂತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಘಟನೆಯಲ್ಲಿ 20 ಒತ್ತೆಯಾಳುಗಳು ಸಾವನ್ನಪ್ಪಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಅಲ್ಲದೆ ಮೃತರ ಪೈಕಿ ಹೆಚ್ಚಿನವರು ಇಟಲಿ ಮತ್ತು ಜಪಾನಿಯರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಢಾಕಾದ ದೂತವಾಸ ವಲಯದಲ್ಲಿರುವ ರೆಸ್ಟೋರೆಂಟ್ ಮೇಲೆ ಉಗ್ರ ದಾಳಿ ಹಿನ್ನೆಲೆ ಕಳೆದ ರಾತ್ರಿಯಿಂದ ಕಾರ್ಯಾಚರಣೆ ಕೈಗೊಂಡಿದ್ದ ಭದ್ರತಾ ಪಡೆ ಯೋಧರು ಸತತ 14 ಗಂಟೆಗಳ ನಂತರ ಕಾರ್ಯಾಚರಣೆ ಅಂತ್ಯಗೊಳಿಸಿದ್ದಾರೆ. ಉಗ್ರರು ಒತ್ತೆ ಇರಿಸಿಕೊಂಡಿದ್ದವರ ಪೈಕಿ ಕೆಲವರನ್ನು ರಕ್ಷಿಸಲಾಗಿದ್ದು, ಆಂಬ್ಯುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
100 ಕಮಾಂಡರ್ ಗಳು ಸುಧೀರ್ಘ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಯೋಧರು ಆರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರು ಬಾಂಗ್ಲಾ ಪೊಲೀಸರು ಸಹ ಮೃತಪಟ್ಟಿದ್ದಾರೆ.
ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಶಸ್ತ್ರಸರ್ಜಿತ ಬಂದೂಕುಧಾರಿಗಳು ರೆಸ್ಟೋರೆಂಟ್ ಮೇಲೆ ದಾಳಿ ಮಾಡಿ 25ಕ್ಕೂ ಹೆಚ್ಚು ವಿದೇಶಿಗರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದರು.
ಇನ್ನು ಐಎಸ್ಐಎಸ್ ಉಗ್ರ ಸಂಘಟನೆ ಈ ದಾಳಿಯ ಹೊಣೆಹೊತ್ತುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.