ವಿದೇಶ

ಬಾಗ್ದಾದ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 11 ಸಾವು, 32 ಮಂದಿಗೆ ಗಾಯ

ಶಿಯಾ ಗುಂಪಿನವರು ಹೆಚ್ಚಾಗಿರುವ ಬಾಗ್ದಾದ್ ನ ಈಶಾನ್ಯ ಜಿಲ್ಲೆಯ ಹೊರಾಂಗಣ ಮಾರುಕಟ್ಟೆಯಲ್ಲಿ ಮಂಗಳವಾರ ಬೆಳಗ್ಗೆ...

ಬಾಗ್ದಾದ್ ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 11 ಸಾವು, 32 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Published On :
ಬಾಗ್ದಾದ್: ಶಿಯಾ ಗುಂಪಿನವರು ಹೆಚ್ಚಾಗಿರುವ ಬಾಗ್ದಾದ್ ನ ಈಶಾನ್ಯ ಜಿಲ್ಲೆಯ ಹೊರಾಂಗಣ ಮಾರುಕಟ್ಟೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಆತ್ಮಹತ್ಯಾ ಬಾಂಬ್ ದಾಳಿಗೆ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ. 32 ಮಂದಿಗೆ ಗಾಯಗಳಾಗಿವೆ. 
ಇದೀಗ ನಗರದ ಸುತ್ತಮುತ್ತ ಭದ್ರತೆಗೆ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ಕಳೆದ ವಾರವಷ್ಟೇ ಇಸಿಎಸ್ ಬಾಗ್ದಾದ್ ನಲ್ಲಿ ಎರಡು ಭಾರೀ ದೊಡ್ಡ ಮಟ್ಟದ ದಾಳಿ ನಡೆಸಿತ್ತು. ನಿನ್ನೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆಶ್ ಕಾರ್ಟರ್, ಇಸಿಸ್ ಉಗ್ರಗಾಮಿಗಳನ್ನು ಸದೆಬಡಿಯಲು 560 ಹೆಚ್ಚಿನ ಪಡೆಗಳನ್ನು ಇರಾಕಿಗೆ ಕಳುಹಿಸಲಾಗುವುದು ಎಂದು ಹೇಳಿದ್ದರು.
ಸ್ಫೋಟಕವನ್ನು ಹೊತ್ತ ಟ್ರಕ್ ಇಂದು ಬೆಳಗ್ಗೆ ಮಾರುಕಟ್ಟೆ ಪ್ರದೇಶದಲ್ಲಿ ಜನಸಂದಣಿ ಹೆಚ್ಚಾಗಿರುವ ಸಂದರ್ಭದಲ್ಲಿ ದಾಳಿ ನಡೆದಿದೆ. ಘಟನೆಯಲ್ಲಿ ಅನೇಕ ಕಟ್ಟಡಳು ಮತ್ತು ವಾಹನಗಳಿಗೆ ಹಾನಿಯುಂಟಾಗಿದೆ.
ತಕ್ಷಣಕ್ಕೆ ಯಾವ ಸಂಘಟನೆಯೂ ದಾಳಿಯ ಹೊಣೆ ಹೊತ್ತುಕೊಳ್ಳಲಿಲ್ಲ. ಆದರೆ ಇದು ಇಸಿಎಸ್ ಸಂಘಟನೆಯ ಕುಕೃತ್ಯವೆಂದು ಪೊಲೀಸರು ಹೇಳುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.