ಭಾರತದೊಂದಿಗಿನ ವಾಣಿಜ್ಯ, ವಿದೇಶಾಂಗ ಸಂಬಂಧಗಳನ್ನು ಸ್ಥಗಿತಗೊಳಿಸಿ: ಉಗ್ರ ಹಫೀಜ್ ಸಯೀದ್
ಭಾರತದೊಂದಿಗಿನ ವಿದೇಶಾಂಗ, ವಾಣಿಜ್ಯ ಸಂಬಂಧಗಳನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಉಗ್ರ ಹಫೀಜ್ ಸಯೀದ್ ಪಾಕಿಸ್ತಾನ ಸರ್ಕಾರವನ್ನು ಆಗ್ರಹಿಸಿದ್ದಾನೆ.

ಲಾಹೋರ್: ಭಾರತದೊಂದಿಗಿನ ವಿದೇಶಾಂಗ, ವಾಣಿಜ್ಯ ಸಂಬಂಧಗಳನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಜಮಾತ್-ಉದ್-ದಾವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಪಾಕಿಸ್ತಾನ ಸರ್ಕಾರವನ್ನು ಆಗ್ರಹಿಸಿದ್ದಾನೆ.
ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಉಗ್ರ ಬುರ್ಹಾನ್ ಮುಜಾಫರ್ ವಾನಿ ಹತ್ಯೆಯ ನಂತರ ಉಗ್ರ ಹಫೀಜ್ ಸಯೀದ್, ಭಾರತದ ವಿರುದ್ಧ ಕಿಡಿಕಾರಿದ್ದು, ಭಾರತದೊಂದಿಗೆ ನಮಗೆ ವಾಣಿಜ್ಯ ಸಂಬಂಧ ಬೇಡ, ತಕ್ಷಣವೇ ಭಾರತದೊಂದಿಗಿನ ವಿದೇಶಾಂಗ ಸಂಬಂಧವನ್ನು ರದ್ದುಗೊಳಿಸಿ ಎಂದು ಪಾಕಿಸ್ತಾನ ಸರ್ಕಾರಕ್ಕೆ ಒತ್ತಾಯಿಸಿದ್ದಾನೆ. ಭಾರತದಲ್ಲಿರುವ ಪಾಕಿಸ್ತಾನದ ಎಲ್ಲಾ ರಾಯಭಾರಿಗಳನ್ನು ವಾಪಸ್ ಕರೆಸಿಕೊಳ್ಳಬೇಕು, ಹಾಗೆಯೇ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರಿಯನ್ನು ವಾಪಸ್ ಭಾರತಕ್ಕೆ ಕಳಿಸಬೇಕು ಎಂದಿರುವ ಹಫೀಜ್ ಸಯೀದ್, ಪಾಕಿಸ್ತಾನ ಕಾಶ್ಮೀರ ಪ್ರತ್ಯೇಕತಾವಾದಿಗಳ ಪರವಾಗಿದೆ ಎಂದು ಹೇಳಿದ್ದಾನೆ. ಈಗಾಗಲೇ ಉಗ್ರ ಹಫೀಜ್ ತಲೆಗೆ ಅಮೆರಿಕ 10 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


