ಭಾರತದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ: ನಾಗರಿಕರ ರಕ್ಷಣೆಗೆ ಅಮೆರಿಕ ಮನವಿ
ಭಾರತದಲ್ಲಿ ಹೆಚ್ಚಾಗುತ್ತಿರುವ ಅಸಹಿಷ್ಣುತೆ ಮತ್ತು ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಮೆರಿಕ ನಾಗರಿಕರ ರಕ್ಷಣೆಗೆ....

Published On :
ವಾಷಿಂಗ್ಟನ್: ಭಾರತದಲ್ಲಿ ಹೆಚ್ಚಾಗುತ್ತಿರುವ ಅಸಹಿಷ್ಣುತೆ ಮತ್ತು ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅಮೆರಿಕ ನಾಗರಿಕರ ರಕ್ಷಣೆಗೆ ಮತ್ತು ಅಪರಾಧಿಗಳಿಗೆ ಶಿಕ್ಷೆ ನೀಡಲು ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಭಾರತ ಸರ್ಕಾರ ಸಾಧ್ಯವಾದುದನ್ನೆಲ್ಲ ಮಾಡಬೇಕು ಎಂದು ಹೇಳಿದೆ.
ದನದ ಮಾಂಸ ತಿಂದ ಜನರ ವಿರುದ್ಧ ನಡೆದ ಹಿಂಸಾಚಾರ ಮತ್ತು ಮಧ್ಯ ಪ್ರದೇಶದಲ್ಲಿ ಎಮ್ಮೆಯ ಮಾಂಸ ಹೊತ್ತುಕೊಂಡು ಹೋಗುತ್ತಿದ್ದ ಇಬ್ಬರು ಮುಸ್ಲಿಂ ಮಹಿಳೆಯರ ಮೇಲೆ ದನದ ಮಾಂಸ ಹೊತ್ತುಕೊಂಡು ಹೋಗುತ್ತಿದ್ದಾರೆ ಎಂದು ಭಾವಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದ ವರದಿಗಳಿಗೆ ಪ್ರತಿಕ್ರಿಯಿಸಿದ ಅಮೆರಿಕ ಸರ್ಕಾರದ ವಕ್ತಾರ ಜಾನ್ ಕಿರ್ಬಿ, ಜನರು ಒಗ್ಗಟ್ಟಿನಿಂದ ಜೀವನ ನಡೆಸಬೇಕು, ಭಾರತ ಸರ್ಕಾರ ಧಾರ್ಮಿಕ ಸ್ವಾತಂತ್ರ್ಯ ಮತ್ತು ಭಾವನೆಗಳನ್ನು ಅಭಿವ್ಯಕ್ತಿಪಡಿಸುವ ಸ್ವಾತಂತ್ರ್ಯವನ್ನು ನೀಡಿದೆ. ಅಂತಹದ್ದರಲ್ಲಿ ಇಂತಹ ಅಸಹಿಷ್ಣುತೆ ವಿರುದ್ಧ ಹೋರಾಡಬೇಕಿದೆ ಎಂದು ಹೇಳಿದೆ.
ವಿಶ್ವದ ದೇಶಗಳಲ್ಲಿ ಅಸಹಿಷ್ಣುತೆ, ಹಿಂಸಾಚಾರ ಹೆಚ್ಚಾದರೆ ಇದು ಸೌಹಾರ್ದಕ್ಕೆ ಧಕ್ಕೆಯನ್ನುಂಟುಮಾಡುತ್ತದೆ. ಯಾವೆಲ್ಲ ದೇಶಗಳು ಇಂತಹ ಸಮಸ್ಯೆಗಳನ್ನು ಎದುರಿಸುತ್ತವೆಯೋ ಆ ದೇಶಗಳ ಸರ್ಕಾರಗಳು ಅಲ್ಲಿನ ಜನರ ರಕ್ಷಣೆಗೆ ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ಮಾಡಬೇಕು ಮತ್ತು ಅಪರಾಧಿಗಳಿಗೆ ಶಿಕ್ಷೆ ನೀಡಬೇಕು ಎಂದು ಅಮೆರಿಕ ಒತ್ತಾಯಿಸಿದೆ.
ಭಾರತ ಮತ್ತು ಅಮೆರಿಕ ದೇಶಗಳ ಹಿತಾಸಕ್ತಿಗೆ ಸಹಿಷ್ಣುತೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಭಾರತೀಯರು ಸಹಿಷ್ಣುಗಳಾಗಿ ಬಾಳ್ವೆ ನಡೆಸುವ ಭಾವನೆಯನ್ನು ಮೂಡಿಸುವಲ್ಲಿ ಅಮೆರಿಕ ಕಾರ್ಯನಿರ್ವಹಿಸುತ್ತದೆ ಎಂದು ಕಿರ್ಬಿ ಹೇಳಿದ್ದಾರೆ.
ಸತ್ತ ಹಸುವಿನ ಚರ್ಮವನ್ನು ಸುಲಿಯುತ್ತಿದ್ದ ದಲಿತರ ಮೇಲೆ ಗುಜರಾತ್ ನ ಉನಾದಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವ್ಯಾಪಕ ಟೀಕೆ ಕೇಳಿಬರುತ್ತಿರುವಾಗಲೇ ಅಮೆರಿಕದ ಈ ಪ್ರತಿಕ್ರಿಯೆ ಯೋಚನೆ ಮಾಡುವಂತೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


