ವಿದೇಶ

ಭಾರತ-ಅಮೆರಿಕ ಸಂಬಂಧ ಜಾಗತಿಕವಾಗಿ ವಿಶೇಷ ಮಹತ್ವ ಹೊಂದಿದೆ: ಅಮೆರಿಕ

ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಅಮೆರಿಕಗೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ಅಮೆರಿಕ ಅಧಿಕಾರಿಗಳು ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧ ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದಿದೆ ಎಂದು ಬಣ್ಣಿಸಿದ್ದಾರೆ.

ಭಾರತ-ಅಮೆರಿಕ ಸಂಬಂಧ ಜಾಗತಿಕವಾಗಿ ವಿಶೇಷ ಮಹತ್ವ ಹೊಂದಿದೆ: ಅಮೆರಿಕ
Published On :

ವಾಷಿಂಗ್ ಟನ್: ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಅಮೆರಿಕಗೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ಅಮೆರಿಕ ಅಧಿಕಾರಿಗಳು ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧ ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದಿದೆ ಎಂದು ಬಣ್ಣಿಸಿದ್ದಾರೆ. 
ಉಭಯ ದೇಶಗಳ ಸಂಬಂಧ ಪ್ರಾದೇಶಿಕವಾಗಿಯಷ್ಟೇ ಅಲ್ಲದೆ ಜಾಗತಿಕವಾಗಿಯೂ ವಿಶೇಷವಾದ ಮಹತ್ವ ಪಡೆದುಕೊಂಡಿದೆ ಎಂದು ಅಮೆರಿಕ ಅಧಿಕಾರಿ ಮಾರ್ಕ್ ಟೋನರ್ ತಿಳಿಸಿದ್ದಾರೆ. ಭಾರತದೊಂದಿಗೆ ಅಮೆರಿಕ ವಿಶಾಲ ದ್ವಿಪಕ್ಷೀಯ ಸಂಬಂಧ ಹೊಂದಿದ್ದು ಅದನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿದ್ದೇವೆ ಎಂದು ಮಾರ್ಕ್ ಟೋನರ್ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಅಂಗವಾಗಿ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೂ.7 -8 ರಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡಲಿದ್ದು ಅಮೆರಿಕ ಕಾಂಗ್ರೆಸ್(ಸಂಸತ್) ನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.