ಅಫ್ಘಾನಿಸ್ತಾನದ ಅಭಿವೃದ್ಧಿ ಪ್ರತಿಯೊಬ್ಬ ಭಾರತೀಯನ ಆಶಯ: ಮೋದಿ
ಅಫ್ಘಾನಿಸ್ತಾನದ ಅಭಿವೃದ್ಧಿ ಪ್ರತಿಯೊಬ್ಬ ಭಾರತಿಯನ ಆಶಯವಾಗಿದೆ ಎಂದು ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹೆರತ್: ಅಫ್ಘಾನಿಸ್ತಾನದ ಅಭಿವೃದ್ಧಿ ಪ್ರತಿಯೊಬ್ಬ ಭಾರತಿಯನ ಆಶಯವಾಗಿದೆ ಎಂದು ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಭಾರತ ನಿರ್ಮಾಣ ಮಾಡಿರುವ ಸಲ್ಮಾ ಅಣೆಕಟ್ಟನ್ನು ಅಲ್ಲಿನ ಅಧ್ಯಕ್ಷ ಅಶ್ರಫ್ ಘನಿ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಫ್ಘಾನಿಸ್ತಾನ ಅಭಿವೃದ್ಧಿಯಾಗಬೇಕೆಂಬುದು ಭಾರತೀಯರ ದೀರ್ಘಕಾಲಿಕ ಆಶಯವಾಗಿದೆ ಎಂದು ಮೋದಿ ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ಅಫ್ಘಾನಿಸ್ತಾನದಲ್ಲಿ ಆಳವಾಗಿ ಬೇರೂರಬೇಕು ಹಾಗೂ ಇಲ್ಲಿನ ಆರ್ಥಿಕತೆ ಸದೃಢವಾಗುವುದನ್ನು ಭಾರತ ಎದುರು ನೋಡುತ್ತಿದೆ, ಇಲ್ಲಿಗೆ ಭೇಟಿ ನೀಡಿರುವುದು ಕೇವಲ ಸಲ್ಮಾ ಅಣೆಕಟ್ಟು ಉದ್ಘಾಟನೆಗೆ ಮಾತ್ರವಲ್ಲ, ಅಫ್ಘಾನಿಸ್ತಾನದ ಭವಿಷ್ಯದ ಪುನರ್ ನಿರ್ಮಾಣದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಾಗಿ ಮೋದಿ ತಿಳಿಸಿದ್ದಾರೆ. 1,700ಕೋಟಿ ರೂ ವೆಚ್ಚದಲ್ಲಿ ಸಲ್ಮಾ ಅಣೆಕಟ್ಟನ್ನು ನಿರ್ಮಿಸಲಾಗಿದ್ದು ಹೆರಾತ್ ನಲ್ಲಿ ಭೂಮಿಯನ್ನು ಫಲವತ್ತಾಗಿಸುವುದಕ್ಕೆ ಈ ಅಣೆಕಟ್ಟು ನೆರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


