ವಿದೇಶ

ಬಾಂಗ್ಲಾದೇಶ: ಹಿಂದೂ ಆಶ್ರಮದ ಕೆಲಸಗಾರನ ಹತ್ಯೆ

ಬಾಂಗ್ಲಾದೇಶದ ಹಿಂದೂ ಆಶ್ರಮದಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 62 ವರ್ಷದ ವೃದ್ಧನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ..

ಬಾಂಗ್ಲಾದೇಶ: ಹಿಂದೂ ಆಶ್ರಮದ ಕೆಲಸಗಾರನ ಹತ್ಯೆ
ಸಾಂದರ್ಭಿಕ ಚಿತ್ರ
Published On :

ಢಾಕಾ:  ಬಾಂಗ್ಲಾದೇಶದಲ್ಲಿನ ಹಿಂದೂ ಆಶ್ರಮದಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 62 ವರ್ಷದ ವೃದ್ಧನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇತ್ತೀಚೆಗೆ ಹಿಂದೂ ಪೂಜಾರಿಯನ್ನು ಕೊಲೆ ಮಾಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಬಾಂಗ್ಲಾದ ಶ್ರೀ ಠಾಕೂರ್ ಅನುಕೂಲ್​ಚಂದ್ರ ಆಶ್ರಮದ ನಿತ್ಯರಂಜನ್ ಪಾಂಡೆ ಎಂಬ ಕೆಲಸಗಾರನನ್ನು ಶುಕ್ರವಾರ ಉಸಿರು ಗಟ್ಟಿಸಿ ಹತ್ಯೆ ಮಾಡಲಾಗಿದೆ.

ನಿತ್ಯರಂಜನ್ ಪಾಂಡೆ ಶುಕ್ರವಾರ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದಾಗ ಕೆಲವು ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ನಂತರ ಅವರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಇವರು ಶ್ರೀ ಠಾಕೂರ್ ಅನುಕೂಲ್​ಚಂದ್ರ ಆಶ್ರಮದಲ್ಲಿ 40 ವರ್ಷಗಳಿಂದ ಕೆಲಸ ಮಾಡುತ್ತಿದ್ದರು ಎಂದು ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಇತ್ತೀಚೆಗೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಜತೆಗೆ ಕೆಲವನ್ನು ಕೊಲೆ ಸಹ ಮಾಡಲಾಗಿದೆ. ಇತ್ತೀಚೆಗೆ ನಡೆದ ಹತ್ಯೆಗಳ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಬಾಂಗ್ಲಾದೇಶದಲ್ಲಿ ಶೇ. 90ರಷ್ಟು ಮುಸ್ಲಿಂ ಧರ್ಮದವರಿದ್ದು, ಶೇ. 8 ರಷ್ಟು ಮಾತ್ರ ಹಿಂದು ಧರ್ಮದವರು ವಾಸಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.