ಮುಲ್ಲಾ ಅಖ್ತರ್ ಮನ್ಸೂರ್ ಹತ್ಯೆ; ಪಾಕ್ ಬೆಂಬಲಕ್ಕೆ ನಿಂತ ಚೀನಾ
ತಾಲಿಬಾನ್ ಮುಖಂಡ ಮುಲ್ಲಾ ಅಖ್ತರ್ ಮನ್ಸೂರ್‌ನನ್ನು ಅಮೆರಿಕ ಡ್ರೋನ್ ದಾಳಿಯಿಂದ ಹತ್ಯೆಗೈದ ಸಂಬಂಧ ಅಮೆರಿಕ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವ ವಿಚಾರದಲ್ಲಿ ಚೀನಾ ಪಾಕಿಸ್ತಾನ ಬೆಂಬಲಕ್ಕೆ ನಿಂತಿದೆ...

ಬೀಜಿಂಗ್: ತಾಲಿಬಾನ್ ಮುಖಂಡ ಮುಲ್ಲಾ ಅಖ್ತರ್ ಮನ್ಸೂರ್‌ನನ್ನು ಅಮೆರಿಕ ಡ್ರೋನ್ ದಾಳಿಯಿಂದ ಹತ್ಯೆಗೈದ ಸಂಬಂಧ ಅಮೆರಿಕ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವ ವಿಚಾರದಲ್ಲಿ ಚೀನಾ ಪಾಕಿಸ್ತಾನ ಬೆಂಬಲಕ್ಕೆ ನಿಂತಿದೆ.
ಪಾಕಿಸ್ತಾನದ ಸಾರ್ವಭೌಮತ್ವವನ್ನು ಅಂತಾರಾಷ್ಟ್ರೀಯ ಸಮುದಾಯ ಗೌರವಿಸಬೇಕು ಎಂದು ಹೇಳಿರುವ ಚೀನಾ ಪಾಕಿಸ್ತಾನ ಭಯೋತ್ಪಾದನೆಯನ್ನು ನಿಯಂತ್ರಿಸಲು ಸಾಕಷ್ಟು ಪರಿಶ್ರಮವಹಿಸಿದೆ ಎಂದು ಹೇಳಿದೆ. ಈ ಬಗ್ಗೆ ಮಾತನಾಡಿರುವ ಚೀನಾ ವಿದೇಶಾಂಗ ಇಲಾಖೆಯ ವಕ್ತಾರ ಹಾಂಗ್ ಲೀ ಅವರು ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಪಾಕಿಸ್ತಾನದ ಕ್ರಮಗಳು ನಿಜಕ್ಕೂ ಅಭಿನಂದನಾರ್ಹ. ಹೀಗಾಗಿ ಪಾಕಿಸ್ತಾನದ ಸಾರ್ವಭೌಮತ್ವವನ್ನು ಅಂತಾರಾಷ್ಟ್ರೀಯ ಸಮುದಾಯ ಗೌರವಿಸಬೇಕು ಎಂದು ಹೇಳಿದ್ದಾರೆ.
ಕಳೆದ ಮೇ 21ರಂದು ಬಲೂಚಿಸ್ತಾನದಲ್ಲಿ ತಾಲಿಬಾನ್ ಮುಖಂಡ ಮನ್ಸೂರ್ ಹಾಗೂ ಆತನ ವಾಹನ ಚಾಲಕನನ್ನು ಅಮೆರಿಕದ ಡ್ರೋನ್ ದಾಳಿಯಲ್ಲಿ ಹತ್ಯೆಗೈಯಲಾಗಿತ್ತು. ಇದು ನಮ್ಮ ಸಾರ್ವಭೌಮತ್ವಕ್ಕೆ ಇದು ಧಕ್ಕೆ ತಂದಿದೆ ಎಂದು ಪಾಕಿಸ್ತಾನ ಆಕ್ಷೇಪ ವ್ಯಕ್ತಪಡಿಸಿತ್ತು. ಪಾಕಿಸ್ತಾನದ ನೆಲದಲ್ಲಿ ಇನ್ನು ಮುಂದೆ ಅಮೆರಿಕ ನಡೆಸುವ ಡ್ರೋನ್ ದಾಳಿ ಉಭಯ ದೇಶಗಳ ಸಂಬಂಧಕ್ಕೆ ಕುತ್ತು ತಂದೀತು ಎಂದು ಪಾಕಿಸ್ತಾನ ಹೇಳಿದೆ. ಶುಕ್ರವಾರ ಪಾಕಿಸ್ತಾನಕ್ಕೆ ಭೇಟಿ ನೀಡಿದ ಅಮೆರಿಕ ಉನ್ನತ ಮಟ್ಟದ ಸಮಿತಿ ಭೇಟಿ ಮಾಡಿದ ಪಾಕ್ ವಿದೇಶಾಂಗ ಸಚಿವಾಲಯದ ವಕ್ತಾರ ಸರ್ತಾಜ್ ಅಜೀಜ್, ಮೇ 21ರಂದು ನಡೆಸಿದ ದಾಳಿ ಪಾಕಿಸ್ತಾನದ ಸಾರ್ವಭೌಮತ್ವಕ್ಕೆ ಕುಂದುಂಟು ಮಾಡಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


