ಶಾಂಘೈ ವಿಮಾನ ನಿಲ್ದಾಣದಲ್ಲಿ ಸ್ಫೋಟ: 4 ಗಾಯ
ಚೀನಾದ ಶಾಂಘೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗೊಂಡಿರುವ ಘಟನೆ ಸೋಮವಾರ ನಡೆದಿದೆ...

ಬೀಜಿಂಗ್: ಚೀನಾದ ಶಾಂಘೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗೊಂಡಿರುವ ಘಟನೆ ಸೋಮವಾರ ನಡೆದಿದೆ.
ವಾಣಿಜ್ಯದಲ್ಲಿ ಎರಡನೇ ದೊಡ್ಡ ಕೇಂದ್ರ ಎಂದೇ ಹೇಳಲಾಗುವ ಶಾಂಘೈ ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆ ವೇಳೆ ಮಹಿಳೆ ಸೇರಿ ಮೂವರು ಗಾಯಗೊಂಡಿದ್ದಾರೆ. ನಿನ್ನೆ ಮಧ್ಯಾಹ್ನ 2.20ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ದೇಶೀ ನಿರ್ಮಿತ ಬಾಂಬ್ ನಿಂದ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಶಂಕಿತ ವ್ಯಕ್ತಿಯೊಬ್ಬ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿರುವ ತಪಾಸಣಾ ಕೇಂದ್ರ ಬಳಿ ಬಂದಿದ್ದಾನೆ. ಈ ವೇಳೆ ಇದ್ದಕ್ಕಿದ್ದಂತೆ ಕೈಯಲ್ಲಿದ್ದ ದೇಶೀ ನಿರ್ಮಿತ ಬಾಂಬ್ ವೊಂದನ್ನು ಎಸೆದು ಕೂಡಲೇ ಚಾಕುವಿನಿಂದ ತನ್ನ ಕುತ್ತಿಗೆಯನ್ನು ಕೊಯ್ದುಕೊಂಡಿದ್ದಾನೆ. ಬಾಂಬ್ ಎಸೆಯುತ್ತಿದ್ದಂತೆ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸ್ಫೋಟಿಸಿದ ಶಂಕಿತ ವ್ಯಕ್ತಿಯನ್ನು ಪ್ರಸ್ತುತ ಸ್ಥಳೀಯ ಆಸ್ಪತ್ರೆಯಲ್ಲಿರಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸ್ಫೋಟದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಬಿಳಿ ಹೊಗೆ ತುಂಬಿದ್ದ ಬಿಯರ್ ಬಾಟಲಿಯೊಂದು ನನ್ನ ಕಾಲಿನ ಬಳಿ ಉರುಳಿ ಬಂದಿತ್ತು. ಈ ವೇಳೆ ಬಾಟಲಿ ನೋಡಿ ಭಯಪಟ್ಟು ಓಡಿಹೋದೆ ಎಂದು ಪ್ರತ್ಯಕ್ಷದರ್ಶಿಯೊಬ್ಬ ಹೇಳಿದ್ದಾರೆ.
ಇನ್ನು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟದ ಚಿತ್ರ ಹಾಗೂ ವಿಡಿಯೋಗಳಲ್ಲಿ ವಿಮಾನ ನಿಲ್ದಾಣದ ಸುತ್ತಲೂ ಹೊಗೆ ತುಂಬಿದ ವಾತಾವರಣ ಕಂಡುಬರುತ್ತಿದ್ದು, ಘಟನಾ ಸ್ಥಳದಿಂದ ಜನರನ್ನು ಸಿಬ್ಬಂದಿಗಳು ದೂರವಿರುವಂತೆ ತಿಳಿಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ವಿಮಾನ ನಿಲ್ದಾಣದ ಸುತ್ತಲೂ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


