ಎನ್ ಎಸ್ ಜಿ ಸದಸ್ಯತ್ವ ಪಡೆಯಲು ಭಾರತಕ್ಕಿಂತ ಪಾಕಿಸ್ತಾನ ಹೆಚ್ಚಿನ ಅರ್ಹತೆ ಹೊಂದಿದೆ: ಪಾಕಿಸ್ತಾನ
ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ(ಎನ್ಎಸ್ ಜಿ) ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಪ್ರತಿಕ್ರಿಯೆ ನೀಡಿದ್ದಾರೆ.

ಇಸ್ಲಾಮಾಬಾದ್: ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ(ಎನ್ಎಸ್ ಜಿ) ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಪ್ರತಿಕ್ರಿಯೆ ನೀಡಿದ್ದು ಎನ್ಎಸ್ ಜಿ ಸದಸ್ಯತ್ವ ಪಡೆಯಲು ಭಾರತಕ್ಕಿಂತ ಪಾಕಿಸ್ತಾನ ಹೆಚ್ಚಿನ ಅರ್ಹತೆ ಹೊಂದಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಡಾನ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಸರ್ತಾಜ್ ಅಜೀಜ್, ಪಾಕಿಸ್ತಾನದ ಎನ್ಎಸ್ ಜಿ ಸದಸ್ಯತ್ವ ನೀಡುವ ವಿಚಾರವನ್ನು ಬೆಂಬಲಿಸುವಂತೆ ಹಲವು ರಾಷ್ಟ್ರಗಳೊಂದಿಗೆ ರಾಜತಾಂತ್ರಿಕ ಮಾತುಕತೆ ನಡೆಸಲಾಗುತ್ತಿದೆ. 48 ರಾಷ್ಟ್ರಗಳನ್ನೊಳಗೊಂಡ ಎನ್ಎಸ್ ಜಿ ಸಮೂಹ ಹೊಸ ಸದಸ್ಯರ ಸೇರ್ಪಡೆಗೆ ಸಂಬಂಧಿಸಿದಂತೆ ಏಕರೂಪ ಮಾನದಂಡ ರೂಪಿಸಿದ್ದೇ ಆದಲ್ಲಿ ಪಾಕಿಸ್ತಾನ ಭಾರತಕ್ಕಿಂತ ಹೆಚ್ಚಿನ ಅರ್ಹತೆ ಹೊಂದಿದೆ ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ.
ಭಾರತ ಎನ್ಎಸ್ ಜಿ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಪಾಕಿಸ್ತಾನವೂ ಅರ್ಜಿ ಸಲ್ಲಿಸಬೇಕೆಂಬುದು ನಮ್ಮ ಕಾರ್ಯತಂತ್ರದ ಭಾಗವಾಗಿತ್ತು. ಪಾಕಿಸ್ತಾನ ಅರ್ಹಮಾನದಂಡಕ್ಕೆ ಅನುಗುಣವಾಗಿ ಸದಸ್ಯತ್ವ ಪಡೆಯಲು ಬೆಂಬಲ ಗಳಿಸುತ್ತಿದೆ ಎಂದು ಸರ್ತಾಜ್ ಅಜೀಜ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


