ಜಾಫ್ನಾ ನವೀಕೃತ ಕ್ರೀಡಾಂಗಣ ಉದ್ಘಾಟಿಸಿದ ಮೋದಿ, ಸಿರಿಸೇನಾ
ಶ್ರೀಲಂಕಾದ ಉತ್ತರ ಪ್ರಾಂತ್ಯದ ರಾಜಧಾನಿ ನಗರ ಜಾಫ್ನಾದಲ್ಲಿ ನವೀಕೃತ ದುರೈಯಪ್ಪ ಕ್ರೀಡಾಂಗಣವನ್ನು ಪ್ರಧಾನ...

ನವದೆಹಲಿ: ಶ್ರೀಲಂಕಾದ ಉತ್ತರ ಪ್ರಾಂತ್ಯದ ರಾಜಧಾನಿ ನಗರ ಜಾಫ್ನಾದಲ್ಲಿ ನವೀಕೃತ ದುರೈಯಪ್ಪ ಕ್ರೀಡಾಂಗಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಜಂಟಿಯಾಗಿ ಇಂದು ಶ್ರೀಲಂಕಾ ಜನತೆಗೆ ಲೋಕಾರ್ಪಣೆಗೊಳಿಸಿದರು.
ಶಿರಿಸೇನಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳಿಸಿದರೆ, ನರೇಂದ್ರ ಮೋದಿಯವರು ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆಯಲ್ಲಿ ಭಾಗವಹಿಸಿದರು.
ಜಾಫ್ನಾದ ಮಾಜಿ ಮೇಯರ್ ದಿವಂಗತ ಆಲ್ಫ್ರೆಡ್ ತಂಬಿರಾಜ ದುರೈಯಪ್ಪ ಅವರ ಹೆಸರನ್ನು ಕ್ರೀಡಾಂಗಣಕ್ಕೆ ಇಡಲಾಗಿದ್ದು, 7 ಕೋಟಿ ರೂಪಾಯಿ ವೆಚ್ಚದಲ್ಲಿ ಭಾರತ ಇದನ್ನು ನವೀನಗೊಳಿಸಿದೆ.
ಸಾವಿರದ 850 ಜನರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮತ್ತು ಮನರಂಜನಾ ಚಟುವಟಿಕೆಗಳು ನಡೆಯಲಿವೆ. ಶ್ರೀಲಂಕಾದ ಉತ್ತರ ಪ್ರಾಂತ್ಯದ ಯುವಜನತೆ ಅಭಿವೃದ್ಧಿಗೆ ಕ್ರೀಡಾಂಗಣ ನೆರವಾಗಲಿದೆ. 1997ರಿಂದ ಕ್ರೀಡಾಂಗಣವನ್ನು ಉಪಯೋಗಿಸಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


