ವಿದೇಶ

ಇಂಡೋನೇಷ್ಯಾದಲ್ಲಿ 7.8 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಪಶ್ಚಿಮದಲ್ಲಿ ಬುಧವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು,....

ಇಂಡೋನೇಷ್ಯಾದಲ್ಲಿ 7.8 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ
Published On :
ಜಕಾರ್ತಾ: ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಪಶ್ಚಿಮದಲ್ಲಿ ಬುಧವಾರ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಂಡೋನೇಷ್ಯಾದ ಕರಾವಳಿ ತೀರಕ್ಕೆ ಸುನಾಮಿ ಅಪ್ಪಳಿಸಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
ಪಡಾಂಗ್​ನಿಂದ ಪಶ್ಚಿಮಕ್ಕೆ 800 ಕಿ.ಮೀ. ದೂರದ ಸಮುದ್ರದಲ್ಲಿ 10 ಕಿ.ಮೀ. ಆಳದಲ್ಲಿ ಭೂಕಂಪನವಾಗಿದೆ ಎಂದು ಅಮೆರಿಕದ ಭೂಕಂಪ ಅಧ್ಯಯನ ಕೇಂದ್ರ ತಿಳಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಭೂಕಂಪನದಿಂದಾಗಿ ಯಾವುದೇ ಹಾನಿಯಾಗಿಲ್ಲ, ಅಮೆರಿಕ ಭೂಕಂಪ ಅಧ್ಯಯನ ಸಂಸ್ಥೆ ಪ್ರಾರಂಭದಲ್ಲಿ ಭೂಕಂಪನದ ತೀವ್ರತೆ 8.2 ಎಂದು ಹೇಳಿತ್ತು. ಆದರೆ ನಂತರ ಅದು 7.8 ಎಂದು ನಿಖರವಾದ ಮಾಹಿತಿ ನೀಡಿದೆ.
2004ರಲ್ಲಿ ಇಂಡೋನೇಷ್ಯಾದ ಬಳಿ ಸಂಭವಿಸಿದ್ದ ಪ್ರಭಲ ಭೂಕಂಪನದಿಂದ ಸುನಾಮಿ ಅಲೆಗಳು ಎದ್ದು ಇಂಡೋನೇಷ್ಯಾ, ಶ್ರೀಲಂಕಾ, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಲಕ್ಷಾಂತರ ಜನರು ಮೃತಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.