ಪಂಜಾಬಿ ಭಾಷೆಯನ್ನು ಪಾಕಿಸ್ತಾನದ ರಾಷ್ಟ್ರಭಾಷೆಯನ್ನಾಗಿಸಿ: ಉಗ್ರ ಹಫೀಜ್ ಸಯೀದ್
ನಿಷೇಧಿತ ಉಗ್ರ ಸಂಘಟನೆ ಜಮಾತ್- ಉದ್- ದವಾ ದ ಮುಖ್ಯಸ್ಥ ಹಫೀಜ್ ಸಯೀದ್ ಪಂಜಾಬಿ ಭಾಷೆಯನ್ನು ಪಾಕಿಸ್ತಾನದ ರಾಷ್ಟ್ರಭಾಷೆಯನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದಾನೆ.

ಲಾಹೋರ್: ನಿಷೇಧಿತ ಉಗ್ರ ಸಂಘಟನೆ ಜಮಾತ್- ಉದ್- ದವಾ ದ ಮುಖ್ಯಸ್ಥ ಹಫೀಜ್ ಸಯೀದ್ ಪಂಜಾಬಿ ಭಾಷೆಯನ್ನು ಪಾಕಿಸ್ತಾನದ ರಾಷ್ಟ್ರಭಾಷೆಯನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದಾನೆ.
ಉರ್ದು ಭಾಷೆಯನ್ನು ಪಾಕಿಸ್ತಾನದ ರಾಷ್ಟ್ರಭಾಷೆನ್ನಾಗಿ ಘೋಷಿಸುವ ಪಾಕಿಸ್ತಾನದ ನಿರ್ಧಾರವನ್ನು ಪ್ರಶ್ನಿಸಿರುವ ಹಫೀಜ್ ಸಯೀದ್, ಪಂಜಾಬಿ ಪಾಕಿಸ್ತಾನದ ಬಹುಸಂಖ್ಯಾತರು ಮಾತನಾಡುವ ಭಾಷೆಯಾಗಿದೆ. ಆದ್ದರಿಂದ ಅದನ್ನೇ ರಾಷ್ಟ್ರಭಾಷೆಯನ್ನಾಗಿ ಘೋಷಿಸಬೇಕು ಎಂದು ಹೇಳಿದ್ದಾನೆ.
ಪಂಜಾಬಿ ಭಾಷೆಯ ಲಿಪಿ ಗುರ್ಮುಖಿಯಾಗಿರುವುದರಿಂದ 1947 ರಲ್ಲಿ ಪಾಕಿಸ್ತಾನ ಅದನ್ನು ರಾಷ್ಟ್ರಭಾಷೆಯನ್ನಾಗಿ ಘೋಷಿಸಲಿಲ್ಲ. ಒಂದು ವೇಳೆ ಅದನ್ನು ರಾಷ್ಟ್ರ ಭಾಷೆಯನ್ನಾಗಿ ಘೋಷಿಸಿದ್ದರೆ, ಪಾಕಿಸ್ತಾನ ರಚನೆಯಾದ ಎರಡು ರಾಷ್ಟ್ರಗಳ ನಿರ್ಧಾರವನ್ನೇ ಪ್ರಶ್ನೆ ಮಾಡುವಂತಾಗುತ್ತಿತ್ತು ತಾನೂ ಸಹ ಪಂಜಾಬಿ ಭಾಷೆ ಮಾತನಾಡುವ ವ್ಯಕ್ತಿಯಲ್ಲ, ಆದರೆ ಪಂಜಾಬಿಯನ್ನು ರಾಷ್ಟ್ರಭಾಷೆಯನ್ನಾಗಿಸಿದರೆ ದೇಶ ಒಗ್ಗಟ್ಟಿನಿಂದ ಇರಲು ಸಾಧ್ಯ ಎಂದು ಹಫೀಜ್ ಸಯೀದ್ ಹೇಳಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


