ವಿದೇಶ

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ; 12 ಮಂದಿ ಧಾರುಣ ಸಾವು

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸೋರಿಕೆಯಿಂದ ಉಂಟಾದ ಭಾರಿ ಪ್ರಮಾಣದ ಅಗ್ನಿ ಅವಘಡದಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ...

ಚೀನಾದ ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ; 12 ಮಂದಿ ಧಾರುಣ ಸಾವು
ಚೀನಾ ಗಣಿಯಲ್ಲಿ ಅಗ್ನಿ ಅವಘಡ (ಸಂಗ್ರಹ ಚಿತ್ರ)
Published On :

ಬೀಜಿಂಗ್: ಚೀನಾದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸೋರಿಕೆಯಿಂದ ಉಂಟಾದ ಭಾರಿ ಪ್ರಮಾಣದ ಅಗ್ನಿ ಅವಘಡದಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಭಾನುವಾರ ತಡರಾತ್ರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಚೀನಾದ ಜಿಲಿನ್ ಪ್ರಾಂತ್ಯದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಸುದ್ದಿಸಂಸ್ಥೆ ವರದಿ ಮಾಡಿದೆ.  ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ಚೀನಾದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ಸೈನಿಕರು ತುರ್ತು ಕಾರ್ಯಾಚರಣೆ ಕೈಗೊಂಡು ಅಗ್ನಿಯನ್ನು  ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಒಟ್ಟು 316 ಮಂದಿ ರಕ್ಷಣಾ ಸಿಬ್ಬಂದಿಗಳು ಮತ್ತು 46 ವೈದ್ಯಕೀಯ ಸಿಬ್ಬಂದಿಗಳು ಅಹೋರಾತ್ರಿ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು.

ಪ್ರಸ್ತುತ ರಕ್ಷಣಾಕಾರ್ಯ ಅಂತ್ಯಗೊಂಡಿದೆ ಎಂದು ಸೋಮವಾರ ಬೆಳಗ್ಗೆ ಅಧಿಕಾರಿಗಳು ತಿಳಿಸಿದ್ದು, ಘಟನೆಯಲ್ಲಿ ಇನ್ನು ಕೆಲವು ಕಾರ್ವಿುಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರು  ತಿಳಿಸಿದ್ದಾರೆ. ಭಾನುವಾರ ರಾತ್ರಿ11.30ರ ಸುಮಾರಿಗೆ ಬೈಶಾನ್​ನ ಸಾಂಗ್​ಶು ಗಣಿಯಲ್ಲಿ ಅಳವಡಿಸಲಾಗಿದ್ದ ಅನಿಲದ ಪೈಪ್ ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು.  ದುರಂತ ನಡೆದ ಗಣಿ ಟಾಂಗುಹಾ ಮೈನಿಂಗ್ ಇಂಡಸ್ಟ್ರೀ ಕೋ. ಲಿಮಿಟೆಡ್​ಗೆ ಸೇರಿದ್ದು ಎಂದು ತಿಳಿದುಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಭದ್ರತಾ ಅಧಿಕಾರಿಗಳು ತನಿಖೆ  ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.