ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ತಪ್ಪಿಸಲು ಚೀನಾಗೆ ಪಾಕಿಸ್ತಾನ ಸಹಾಯ: ಸರ್ತಾಜ್ ಅಜೀಜ್
ಭಾರತ ಪರಮಾಣು ಪೂರೈಕೆದಾರ ರಾಷ್ಟ್ರಗಳ ಗುಂಪಿನ(ಎನ್ಎಸ್ಜಿ) ಸದಸ್ಯತ್ವ ಪಡೆಯುವುದನ್ನು ತಡೆಯಲು ಚೀನಾಗೆ ಪಾಕಿಸ್ತಾನ ಸಹಾಯ ಮಾಡಿದೆ

ಇಸ್ಲಾಮಾಬಾದ್: ಭಾರತ ಪರಮಾಣು ಪೂರೈಕೆದಾರ ರಾಷ್ಟ್ರಗಳ ಗುಂಪಿನ(ಎನ್ಎಸ್ಜಿ) ಸದಸ್ಯತ್ವ ಪಡೆಯುವುದನ್ನು ತಡೆಯಲು ಚೀನಾಗೆ ಪಾಕಿಸ್ತಾನ ಸಹಾಯ ಮಾಡಿದೆ ಎಂದು ಪಾಕ್ ನ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.
48 ಸದಸ್ಯ ರಾಷ್ಟ್ರಗಳನ್ನು ಹೊಂದಿರುವ ಪರಮಾಣು ಪೂರೈಕೆದಾರ ರಾಷ್ಟ್ರಗಳ ಗುಂಪಿನ ಸದಸ್ಯತ್ವ ಪಡೆಯಲು ಭಾರತ ಸರ್ಕಾರ ಯತ್ನಿಸುತ್ತಿದೆ, ಆದರೆ ಚೀನಾ ಭಾರತದ ಮಹತ್ವಾಕಾಂಕ್ಷೆಗೆ ಅಡ್ಡಿಯಾಗಿದೆ. ಭಾರತಕ್ಕೆ ಸದಸ್ಯತ್ವ ನಿಡುವ ಪ್ರಸ್ತಾಪ ಎದುರಾದಾಗ ಚೀನಾ ವಿರೋಧಕ್ಕೆ ಪಾಕಿಸ್ತಾನ ಬೆಂಬಲ ನೀಡಿತ್ತು ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ.
ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಭಾರತಕ್ಕೆ ಬೆಂಬಲ ನೀಡಿದ್ದವಾದರೂ, ಭಾರತಕ್ಕೆ ಸದಸ್ಯತ್ವ ನೀಡುವುದನ್ನು ಚೀನಾ ವಿರೋಧಿಸಿತ್ತು. ಅಲ್ಲದೇ ಒಂದು ವೇಳೆ ಭಾರತಕ್ಕೆ ವಿಶೇಷ ಸಂಘಟನೆಯಾಗಿರುವ ಪರಮಾಣು ಪೂರೈಕೆದಾರರ ಗುಂಪಿಗೆ ಸೇರಲು ಅವಕಾಶ ದೊರೆತಲ್ಲಿ ಪಾಕಿಸ್ತಾನಕ್ಕೂ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಚೀನಾ ಭರವಸೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


