ವಿದೇಶ

ಭಾರತದಲ್ಲಿ ಫೇಸ್ ಬುಕ್ ಬಳಕೆದಾರರ ಸಂಖ್ಯೆ 142 ಮಿಲಿಯನ್

ಅಮೆರಿಕದ ನಂತರ ಅತಿ ಹೆಚ್ಚು ಫೇಸ್ ಬುಕ್ ಅನ್ನು ಬಳಕೆ ಮಾಡುವವರ ಸಂಖ್ಯೆ ಭಾರತದಲ್ಲಿ ಹೆಚ್ಚಿದೆ...

ಭಾರತದಲ್ಲಿ ಫೇಸ್ ಬುಕ್ ಬಳಕೆದಾರರ ಸಂಖ್ಯೆ 142 ಮಿಲಿಯನ್
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಅಮೆರಿಕದ ನಂತರ ಅತಿ ಹೆಚ್ಚು ಫೇಸ್ ಬುಕ್ ಅನ್ನು ಬಳಕೆ ಮಾಡುವವರ ಸಂಖ್ಯೆ ಭಾರತದಲ್ಲಿ ಹೆಚ್ಚಿದೆ ಎಂದು ವರದಿಗಳು ಹೇಳಿವೆ.
ಭಾರತದಲ್ಲಿ ಫೇಸ್ ಬುಕ್ ಬಳಕೆದಾರರ ಸಂಖ್ಯೆ 142 ಮಿಲಿಯನ್ ತಲುಪಿದ್ದು, ಇದರಲ್ಲಿ ಮೊಬೈಲ್ ಮೂಲಕ ಫೇಸ್ ಬುಕ್ ವೀಕ್ಷಕರೇ 133 ಮಿಲಿಯನ್ ಇದ್ದಾರೆ ಎಂದು ಫೇಸ್ ಬುಕ್ ಸಂಸ್ಥೆಯ ವಿಜಯಶಂಕರ್ ಹೇಳಿದ್ದಾರೆ.
ದಿನದಿಂದ ದಿನಕ್ಕೆ ಫೇಸ್ ಬುಕ್ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲದೇ, ಬ್ರೆಜಿಲ್, ಇಂಡೋನೇಷ್ಯಾ, ಮೆಕ್ಸಿಕೊ ಹಾಗೂ ಫಿಲಿಪ್ರೀನ್ಸ್ ನಲ್ಲಿ ಫೇಸ್ ಬುಕ್ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಫೇಸ್ ಬುಕ್ ಲೈಟ್ ಉದ್ಘಾಟನೆಗೊಂಡ ಕೇವಲ 9 ತಿಂಗಳಲ್ಲಿಯೇ 100 ಮಿಲಿಯನ್ ಬಳಕೆದಾರರನ್ನು ಗಳಿಸಿದೆ ಎಂಬ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.