ವಾಷಿಂಗ್ ಟನ್ ನಲ್ಲಿ ಮೋದಿ-ಷರೀಫ್ ಮಾತುಕತೆ ಸಾಧ್ಯತೆ: ಸರ್ತಾಜ್ ಅಜೀಜ್
ಅಣು ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ನವಾಜ್ ಷರೀಫ್ ಭೇಟಿ ಮಾಡುವ ಸಾಧ್ಯತೆ ಇದೆ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.

ವಾಷಿಂಗ್ ಟನ್: ಅಣು ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ನವಾಜ್ ಷರೀಫ್ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.
ಭೆಟಿಯ ಬಗ್ಗೆ ಸ್ಪಷ್ಟವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ. ಆದರೆ ಸಾಧ್ಯತೆಗಳಿವೆ ಎಂದಷ್ಟೇ ಹೇಳಬಹುದು ಎಂದು ಸರ್ತಾಜ್ ಅಜೀಜ್ ತಿಳಿಸಿದ್ದಾರೆ. ಈ ತಿಂಗಳು ನಡೆಯಲಿರುವ ಅಣು ಭದ್ರತಾ ಸಮ್ಮೇಳನದಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆಹ್ವಾನದ ಮೇರೆಗೆ ನವಾಜ್ ಷರೀಫ್ ಅಮೆರಿಕಾಗೆ ಭೇಟಿ ನೀಡಲಿದ್ದಾರೆ.
ಅಮೆರಿಕ ಪ್ರವಾಸದಲ್ಲಿರುವ ಪಾಕ್ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್, ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ವರ್ಷದ ಪ್ರಾರಂಭದಲ್ಲಿ ದ್ವಿಪಕ್ಷೀಯ ಸಂಬಂಧ ಉತ್ತಮವಾಗಿರಲಿಲ್ಲ. ಆದರೆ ಕಳೆದ 2 ತಿಂಗಳಿನಿಂದ ಉತ್ತಮವಾಗಿದೆ ಎಂದು ಹೇಳಿದ್ದಾರೆ. ಮೋದಿ- ಷರೀಫ್ ಸಂಭಾವ್ಯ ಭೇಟಿಗೂ ಮುನ್ನ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳ ಸಭೆ ನಡೆಯಲಿದೆ ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


