ಟರ್ಕಿಯಲ್ಲಿ ಆತ್ಮಾಹುತಿ ಕಾರ್ ಬಾಂಬ್ ಸ್ಫೋಟ: 34 ಜನ ದುರ್ಮರಣ
ಟರ್ಕಿ ರಾಜಧಾನಿಯಲ್ಲಿ ಅಂಕರಾದಲ್ಲಿ ಆತ್ಮಾಹುತಿ ಕಾರ್ ಬಾಂಬ್ ಸ್ಫೋಟಗೊಂಡ ಪರಿಣಾಮ 34 ಜನರು ಸ್ಥಳದಲ್ಲಿ ಸಾವನ್ನಪ್ಪಿ, 120 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ...

ಅಂಕರಾ: ಟರ್ಕಿ ರಾಜಧಾನಿಯಲ್ಲಿ ಅಂಕರಾದಲ್ಲಿ ಆತ್ಮಾಹುತಿ ಕಾರ್ ಬಾಂಬ್ ಸ್ಫೋಟಗೊಂಡ ಪರಿಣಾಮ 34 ಜನರು ಸ್ಥಳದಲ್ಲಿ ಸಾವನ್ನಪ್ಪಿ, 120 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟರ್ಕಿ ರಾಜಧಾನಿಯ ಹೃದಯಭಾಗದಲ್ಲಿರುವ ಸೇನಾ ಶಿಬಿರ ಗುರಿಯಾಗಿಟ್ಟುಕೊಂಡು ಈ ದಾಳಿ ನಡೆದಿದೆ ಎಂದು ವರದಿಯಾಗಿದ್ದು, ಸೇನಾ ವಾಹನಗಳ ಮೇಲೆ ಕಳೆದ ರಾತ್ರಿ ಬಾಂಬ್ ದಾಳಿ ನಡೆದಿದೆ ಎಂದು ಆರೋಗ್ಯ ಸಚಿವ ಮೆಹ್ಮತ್ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ದಾಳಿಯಿಂದ ರಸ್ತೆಯಲ್ಲಿದ್ದ ಅನೇಕ ಬಸ್‌ಗಳು ಜಖಂ ಆಗಿವೆ.
ಅಂಕಾರದ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾರು ಬಾಂಬ್ ಸ್ಫೋಟಗೊಂಡಿದೆ. ಘಟನೆ ಸಂಭವಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಇದರ ದೃಶ್ಯಗಳು ಹರಿದಾಡುತ್ತಿದ್ದು, ಫೇಸ್‌ಬುಕ್‌ಗೆ ನಿರ್ಬಂಧ ಹೇರಲಾಗಿದೆ.
ಉಗ್ರರು ಮತ್ತೆ ಬಾಂಬ್ ಸ್ಫೋಟಿಸುವ ಸೂಚನೆ ಇದ್ದು, ಜನ ಹೆಚ್ಚಾಗಿ ಗುಂಪು ಗೂಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಕಳೆದ 5 ತಿಂಗಳಲ್ಲಿ ನಡೆದ ಮೂರನೇ ಅತಿ ದೊಡ್ಡ ಬಾಂಬ್ ಸ್ಫೋಟ ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


