ಬಾಂಬ್ ಸ್ಫೋಟಿಸಿದ ವ್ಯಕ್ತಿಯ ಭಾವಚಿತ್ರ ಹಂಚಿಕೆ: ಟರ್ಕಿಯಲ್ಲಿ ಸಾಮಾಜಿಕ ಜಾಲತಾಣಕ್ಕೆ ನಿಷೇಧ
ಟರ್ಕಿಯಲ್ಲಿ ಬಾಂಬ್ ಸ್ಫೋಟಿಸಿದ ಆತ್ಮಹತ್ಯಾ ದಾಳಿಕೋರನ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದರಿಂದ ಟರ್ಕಿ ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳಿಗೆ ಪ್ರವೇಶ ನಿಷೇಧಿಸಿದೆ.

ಲಂಡನ್: ಟರ್ಕಿಯಲ್ಲಿ ಬಾಂಬ್ ಸ್ಫೋಟಿಸಿದ ಆತ್ಮಹತ್ಯಾ ದಾಳಿಕೋರನ ಭಾವಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದರಿಂದ ಟರ್ಕಿ ದೂರಸಂಪರ್ಕ ಪ್ರಾಧಿಕಾರ, ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳಿಗೆ ಪ್ರವೇಶ ನಿಷೇಧಿಸಿದೆ.
ಅಂತರ್ಜಾಲ ಪತ್ರಿಕೆ ಆರ್ ಟಿ.ಕಾಂ ನ ವರದಿ ಪ್ರಕಾರ ಬಾಂಬ್ ಸ್ಫೋಟಿಸಿದ ಆತ್ಮಹತ್ಯಾ ದಾಳಿಕೋರನ ಭಾವಚಿತ್ರ ಸಾಮಾಜಿಕ ಜಾಲತಾಣ ಫೇಸ್ ಬುಕ್, ಟ್ವಿಟರ್ ನಲ್ಲಿ ವ್ಯಾಪಕವಾಗಿ ಹಂಚಿಕೆ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ, ಸಾರ್ವಜನಿಕರು ಸಾಮಾಜಿಕ ಜಾಲತಾಣ ಪ್ರವೇಶವನ್ನು(ಬಳಕೆ)ಯನ್ನು ನಿಷೇಧಿಸಲಾಗಿದೆ. ಕಳೆದ ವರ್ಷವೂ ಸಹ ಇಂಥದ್ದೇ ಘಟನೆ ನಡೆದಿದ್ದರಿಂಡ ಟರ್ಕಿಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ಬಳಕೆಗೆ ತಾತ್ಕಾಲಿಕ ನಿಷೇಧ ವಿಧಿಸಲಾಗಿತ್ತು. ವ್ಯಕ್ತಿಯೊಬ್ಬ ಉಗ್ರರ ಗ್ಯಾನ್ ಪಾಯಿಂಟ್ ನಲ್ಲಿದ್ದ ಚಿತ್ರವನ್ನು ಹಂಚಿಕೆ ಮಾಡಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿತ್ತು.
ಟರ್ಕಿಯಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟದಲ್ಲಿ 34 ಜನರು ಸಾವನ್ನಪ್ಪಿದ್ದರೆ 125 ಜನರಿಗೆ ತೀವ್ರ ಗಾಯಗಳುಂಟಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


