ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗುವುದಿಲ್ಲ ಎಂದು ಒಬಾಮ ನಂಬಿದ್ದಾರೆ: ಶ್ವೇತ ಭವನ
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಡೊನಾಲ್ಡ್ ಟ್ರಂಪ್ ಮುಂದಿನ ಅಧ್ಯಕ್ಷರಾಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಶ್ವೇತ ಭವನ ತಿಳಿಸಿದೆ.

ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಡೊನಾಲ್ಡ್ ಟ್ರಂಪ್ ಮುಂದಿನ ಅಧ್ಯಕ್ಷರಾಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಶ್ವೇತ ಭವನ ತಿಳಿಸಿದೆ.
ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಅಭಿಪ್ರಾಯಗಳು ಜಾಗತಿಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಸ್ಥಳೀಯ ರಾಜಕಾರಣಿಗಳ ಚರ್ಚೆಗಳು ಜಾಗತಿಕ ಪಟ್ಟದಲ್ಲಿ ಪರಿಣಾಮ ಉಂಟುಮಾಡುತ್ತದೆ ಆದ್ದರಿಂದ ಅಮೆರಿಕದ ಜನತೆ ಡೊನಾಲ್ಡ್ ಟ್ರಂಪ್ ನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದಿಲ್ಲ ಎಂದು ಒಬಾಮ ನಂಬಿದ್ದಾರೆ ಎಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೋಶ್ ಅರ್ನೆಸ್ಟ್ ಹೇಳಿದ್ದಾರೆ.
ಟ್ರಂಪ್ ಅವರ ಪ್ರಚಾರ ಶೈಲಿಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅರ್ನೆಸ್ಟ್, ಟ್ರಂಪ್ ಅಮೆರಿಕ ಅಧ್ಯಕ್ಷರಾಗುವುದಿಲ್ಲ ಎಂದು ಹಲವು ಸಂದರ್ಭದಗಳಲ್ಲಿ ಬರಾಕ್ ಒಬಾಮ ಬಹಿರಂಗವಾಗಿಯೇ ಹೇಳಿದ್ದಾರೆ. ಅಮೆರಿಕದ ಜನರು ಶಿಸ್ತಿನ ಹಾಗೂ ಬುದ್ಧಿವಂತಿಕೆಯ ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ ಎಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೋಶ್ ಅರ್ನೆಸ್ಟ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


