ವಿದೇಶ

ಅಫ್ಘಾನಿಸ್ತಾನ ಅಭಿವೃದ್ಧಿಗೆ ಉಗ್ರ ಸಂಘಟನೆಗಳ ವಿರುದ್ಧ ಯುಎನ್ ನಿರ್ಬಂಧ ಕಟ್ಟುನಿಟ್ಟಾಗಿ ಜಾರಿಸಗೊಳಿಸಿ: ಭಾರತ

ತಾಲಿಬಾನ್, ಅಲ್- ಖೈದಾ ಉಗ್ರ ಸಂಘಟನೆಗಳ ವಿರುದ್ಧ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಹೊರಡಿಸಿರುವ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಭಾರತ ಕರೆ ನೀಡಿದೆ.

ಅಫ್ಘಾನಿಸ್ತಾನ ಅಭಿವೃದ್ಧಿಗೆ ಉಗ್ರ ಸಂಘಟನೆಗಳ ವಿರುದ್ಧ ಯುಎನ್ ನಿರ್ಬಂಧ ಕಟ್ಟುನಿಟ್ಟಾಗಿ ಜಾರಿಸಗೊಳಿಸಿ: ಭಾರತ
ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಸಯೀದ್ ಅಕ್ಬರುದ್ದೀನ್
Published On :

ಯುಎನ್: ತಾಲಿಬಾನ್, ಅಲ್- ಖೈದಾ ಉಗ್ರ ಸಂಘಟನೆಗಳ ವಿರುದ್ಧ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಹೊರಡಿಸಿರುವ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಭಾರತ ಕರೆ ನೀಡಿದೆ.

ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅಫ್ಘಾನಿಸ್ತಾನಕ್ಕೆ ವಿಶ್ವ ಸಂಸ್ಥೆಯ ನೆರವು ವಿಷಯದ ಬಗ್ಗೆ ನಡೆದ ಚರ್ಚೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಸಯೀದ್ ಅಕ್ಬರುದ್ದೀನ್, ಅಫ್ಘಾನಿಸ್ತಾನದ ಅಭಿವೃದ್ಧಿಗೆ ಎದುರಾಗುವ ಅಪಾಯದ ವಿರುದ್ಧ ಹೋರಾಡಲು ಭದ್ರತಾ ಮಂಡಳಿ ತಾಲಿಬಾನ್, ಅಲ್- ಖೈದಾ ಉಗ್ರ ಸಂಘಟನೆ ಹಾಗೂ ಅದರ ಉಗ್ರರ ವಿರುದ್ಧ ವಿಧಿಸಿರುವ ನಿರ್ಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಕರೆ ನೀಡಿದ್ದಾರೆ.

ತಾಲಿಬಾನ್ ತನ್ನ ನೆಲೆಯನ್ನು ವಿಸ್ತರಿಸುತ್ತಿರುವ ಬಗ್ಗೆ ಎಚ್ಚರಿಕೆ ನೀಡಿರುವ ಅಕ್ಬರುದ್ದೀನ್, ಅಫ್ಘಾನಿಸ್ತಾನದ ಭದ್ರತಾ ಸ್ಥಿತಿಯ ಬಗ್ಗೆ ವಿಶ್ವ ಸಂಸ್ಥೆ ತುರ್ತಾಗಿ ಗಮನ ಹರಿಸಬೇಕಿದೆ. ಅಫ್ಘಾನಿಸ್ತಾನದಲ್ಲಿ ಸಂಭವಿಸುತ್ತಿರುವ ಪ್ರಾಣಹಾನಿ ಘಟನೆಗಳು ಹದಗೆಟ್ಟ ಭದ್ರತಾ ಪರಿಸ್ಥಿತಿಯ ಸಂಕೇತವಾಗಿದೆ. ಈ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯ ತುರ್ತಾಗಿ ಗಮನ ಹರಿಸಬೇಕಿದೆ ಎಂದು ಸಯೀದ್ ಅಕ್ಬರುದ್ದೀನ್ ಕರೆ ನೀಡಿದ್ದಾರೆ.

ಭಾರತ ಸರ್ಕಾರ ಅಫ್ಘಾನಿಸ್ತಾನಕ್ಕೆ ಅಗತ್ಯ ನೆರವು ನೀಡುತ್ತಿದ್ದು, ಅಲ್ಲಿನ ಮಿಲಿಟರಿ ಹಾಗೂ ಭದ್ರತಾ ಪಡೆಗಳಿಗೆ ತರಬೇತಿ ನೀಡುತ್ತಿದೆ ಎಂದು ಅಕ್ಬರುದ್ದೀನ್ ಭದ್ರತಾ ಮಂಡಳಿಗೆ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.