ಕ್ಯೂಬಾ ಗೆ ಭೇಟಿ ನೀಡಿದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ
ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಕ್ಯೂಬಾಗೆ ಐತಿಹಾಸಿಕ ಭೇಟಿ ನೀಡಿದ್ದಾರೆ. ಕಳೆದ ಎಂಟು ದಶಮಾನಗಳಿಂದಲೂ ಉಭಯ ರಾಷ್ಟ್ರಗಳ...

ಹವಾನಾ: ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಕ್ಯೂಬಾಗೆ ಐತಿಹಾಸಿಕ ಭೇಟಿ ನೀಡಿದ್ದಾರೆ. ಕಳೆದ ಎಂಟು ದಶಮಾನಗಳಿಂದಲೂ ಉಭಯ ರಾಷ್ಟ್ರಗಳ ಮಧ್ಯೆ ಶೀತಲ ಸಮರವುಂಟಾಗಿ ಯಾವುದೇ ದ್ವಿಪಕ್ಷಿಯ ಮಾತುಕತೆ ನಡೆದಿರಲಿಲ್ಲ. ಇದೇ ಮೊದಲ ಸಲ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕ್ಯೂಬಾಗೆ ಭೇಟಿ ನೀಡಿದ್ದಾರೆ.
ಒಬಾಮ ಭೇಟಿ ಹಿನ್ನೆಲೆಯಲ್ಲಿ ಕ್ಯೂಬಾ ರಾಜಧಾನಿ ಹವಾನಾದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎರಡು ದಿನಗಳ ಪ್ರವಾಸ ಕೈಗೊಂಡಿರುವ ಒಬಾಮ ಜತೆ ಪತ್ನಿ ಮಿಷೆಲ್, ಪುತ್ರಿಯರಾದ ಮಲಿಯಾ ಹಾಗೂ ಸಾಷಾ ಸಹ ಪ್ರಯಾಣ ಬೆಳೆಸಿದ್ದಾರೆ.
ಪ್ರವಾಸದ ವೇಳೆ ಕ್ಯೂಬಾ ಅಧ್ಯಕ್ಷ ರೌಲ್ ಕ್ಯಾಸ್ಟ್ರೋ ಜತೆಗೆ ದ್ವಿಪಕ್ಷೀಯ ಮಾತುಕತೆ ಹಾಗೂ ಅವರೊಂದಿಗೆ ಅಧಿಕೃತ ಔತಣಕೂಟದಲ್ಲಿ ಒಬಾಮ ಪಾಲ್ಗೊಳ್ಳಲಿದ್ದಾರೆ. ನಂತರ ಅಲ್ಲಿನ ಉದ್ಯಮಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಬರಾಕ್ ಒಬಾಮ ಕ್ಯೂಬಾ ಭೇಟಿಗೆ ಅಮೆರಿಕದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅವರ ಪ್ರವಾಸಕ್ಕೆ ಕೆಲವೆಡೆ ಅಸಮಾಧಾನವೂ ಕೇಳಿಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


