ವಿದೇಶ

ಗರ್ಭಪಾತ ಮಾಡಿಸಿಕೊಳ್ಳುವ ಮಹಿಳೆಯರನ್ನು ಶಿಕ್ಷಿಸಿ: ಟ್ರಂಪ್

ಗರ್ಭಪಾತಕ್ಕೆ ಒಳಗಾಗುವ ಮಹಿಳೆಯರಿಗೆ ಕೆಲ ವಿಧದ ಶಿಕ್ಷೆಯಾಗಬೇಕು ಎಂದು ಅಮೆರಿಕ ಅಧ್ಯಕ್ಷಿಯ ಚುನಾವಣೆ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ...

ಗರ್ಭಪಾತ ಮಾಡಿಸಿಕೊಳ್ಳುವ ಮಹಿಳೆಯರನ್ನು ಶಿಕ್ಷಿಸಿ: ಟ್ರಂಪ್
ಡೊನಾಲ್ಡ್ ಟ್ರಂಪ್
Published On :

ಬ್ರೂಕ್ ಫೀಲ್ಡ್ : ಗರ್ಭಪಾತಕ್ಕೆ ಒಳಗಾಗುವ ಮಹಿಳೆಯರಿಗೆ ಕೆಲ ವಿಧದ ಶಿಕ್ಷೆಯಾಗಬೇಕು ಎಂದು ಅಮೆರಿಕ ಅಧ್ಯಕ್ಷಿಯ ಚುನಾವಣೆ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮಹಿಳೆಯರು ಪದೇ ಪದೇ ಗರ್ಭಪಾತಕ್ಕೆ ಮಾಡಿಸಿಕೊಂಡು ಭ್ರೂಣ ಹತ್ಯೆಗೆ ಕಾರಣರಾಗುತ್ತಿದ್ದಾರೆ. ಆದ್ದರಿಂದ, ಗರ್ಭಪಾತಕ್ಕೆ ಒಳಗಾಗುವವರಿಗೆ ಕೆಲ ಮಟ್ಟಿನ ಶಿಕ್ಷೆಯಾಗಬೇಕು  ಆದರೆ ಯಾವ ರೀತಿಯ ಶಿಕ್ಷೆ ಎಂಬುದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಡೆಮಾಕ್ರೆಟಿಕ್ ಪಕ್ಷದ ಅಭ್ಯ್ರಥಿ ಹಿಲೆರಿ ಕ್ಲಿಂಟನ್, ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ನೀವು ಹೇಳಿದ ಮಾತ್ರಕ್ಕೆ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಹಿಲರಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಟ್ರಂಪ್ ಜೀವನದಲ್ಲಿ ಮೂರು ಆಂಶಗಳಿಗೆ ವಿನಾಯಿತಿ ನೀಡಬೇಕು. ಆದರೆ ಆ ವಿನಾಯಿತಗಳು ಯಾವುವು ಎಂಬುದನ್ನು ಬಹಿರಂಗಗೊಳಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.