ಅಫ್ಘಾನಿಸ್ತಾನ: ಸರಣಿ ಅಪಘಾತದಲ್ಲಿ ಇಂಧನ ಟ್ಯಾಂಕರ್ ಸ್ಫೋಟ; 73 ಸಾವು
ಅಫ್ಘಾನಿಸ್ತಾನದ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ 73 ಮಂದಿ ದಾರುಣವಾಗಿ...

ಕಾಬೂಲ್: ಅಫ್ಘಾನಿಸ್ತಾನದ ಪ್ರಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ 73 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಕಾಬೂಲ್ ನಗರದ ಪ್ರಮುಖ ರಸ್ತೆ ಮಾರ್ಗದಲ್ಲಿ ಎರಡು ಬಸ್ ಹಾಗೂ ಇಂಧನ ಟ್ಯಾಂಕರ್ ನಡುವೆ ಅಫಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಂಧನ ಟ್ಯಾಂಕರ್ ಸ್ಫೋಟಗೊಂಡು ಪಕ್ಕದಲ್ಲೇ ಇದ್ದ ಎರಡು ಬಸ್ ಗಳಿಗೂ ಬೆಂಕಿ ಹೊತ್ತಿಕೊಂಡಿದ್ದರಿಂದ ಬಸ್ ಗಳಲ್ಲಿದ್ದವರ ಪೈಕಿ 73 ಮಂದಿ ಸಜೀವ ದಹನವಾಗಿದ್ದಾರೆ. ಇನ್ನು ಅಪಘಾತದಲ್ಲಿ 50 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಘಜ್ನಿ ಪ್ರಾಂತ್ಯದ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆ ವಕ್ತಾರರು ತಿಳಿಸಿದ್ದಾರೆ.
ಇನ್ನು ಅಪಘಾತಕ್ಕೆ ಚಾಲಕರ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


