ವಿದೇಶ

ಪನಾಮಾ ಪೇಪರ್ಸ್ ನಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಮ್ ಟರ್ನ್ಬುಲ್ ಹೆಸರು

ಪತ್ರಿಕೋದ್ಯಮ ಜಗತ್ತಿನ ಇತಿಹಾಸದಲ್ಲಿ ಬಹಿರಂಗಗೊಂಡ ಅತ್ಯಂತ ದೊಡ್ಡ ಸೋರಿಕೆ ಪನಾಮಾ ಪೇಪರ್ಸ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ...

ಪನಾಮಾ ಪೇಪರ್ಸ್ ನಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಮ್ ಟರ್ನ್ಬುಲ್ ಹೆಸರು
ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಮ್ ಟರ್ನ್ಬುಲ್
Published On :
ಸಿಡ್ನಿ: ಪತ್ರಿಕೋದ್ಯಮ ಜಗತ್ತಿನ ಇತಿಹಾಸದಲ್ಲಿ ಬಹಿರಂಗಗೊಂಡ ಅತ್ಯಂತ ದೊಡ್ಡ ಸೋರಿಕೆ ಪನಾಮಾ ಪೇಪರ್ಸ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಮ್ ಟರ್ನ್ಬುಲ್ ಹೆಸರು ಕೇಳಿಬಂದಿದೆ. ಈ ಮೂಲಕ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಮ್ ಅವರಿಗೆ ಸಂಕಷ್ಟ ಎದುರಾಗಿದೆ. 
ಅವಧಿ ಪೂರ್ವ ಚುನಾವಣೆ ನಡೆಸಲು ಮುಂದಾಗಿರುವ ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಮ್ ಮೇ.9ರಿಂದ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಪ್ರಾರಂಭಿಸಿದ್ದರು. ಆದರೆ, ಇದೀಗ ಅವರ ಹೆಸರು ಪನಾಮ ಪೇಪರ್ಸ್ ಪಟ್ಟಿಯಲ್ಲಿ ಕೇಳಿ ಬಂದಿದೆ. 
ಪನಾಮಾ ಮೂಲದ ಮೊಸಾಕ್ ಫೋನ್ಸೆಕಾ ಕಾನೂನು ಸಲಹಾ ಸಂಸ್ಥೆ ಸ್ಥಾಪಿಸಿದ್ದ ಸ್ಟಾರ್ ಟೆಕ್ನಾಲಜಿ ಸರ್ವೀಸ್ ಲಿಮಿಟೆಡ್ ನಲ್ಲಿ ಮಾಜಿ ನಿರ್ದೇಶಕರಾಗಿದ್ದರು ಎಂದು ಹೇಳಲಾಗಿದೆ. ಈ ಸಂಸ್ಥೆಯೊಂದಿಗೆ ಸಂಪರ್ಕಹೊಂದಿದ್ದ ಸುಮಾರು 20,000 ಗುಪ್ತ ಕಂಪನಿಗಳ ಬಗ್ಗೆ ಇತ್ತೀಚೆಗೆ  ಮಾಹಿತಿ ಬಿಡುಗಡೆ ಮಾಡಲಾಯಿತು. ಇದರಲ್ಲಿ ಆಸ್ಟ್ರೇಲಿಯಾದ ಪ್ರಧಾನಿಯ ಹೆಸರು ಸೇರ್ಪಡೆಗೊಂಡಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.