ಸ್ವಾಮಿ ನಾರಾಯಣ ಮಂದಿರಕ್ಕೆ ಲಂಡನ್ ನ ಮೊದಲ ಮುಸ್ಲಿಂ ಮೇಯರ್ ಭೇಟಿಯ ಚಿತ್ರ ವೈರಲ್
ಪಾಕಿಸ್ತಾನದ ಬಸ್ ಚಾಲಕನ ಮಗನಾದ ಸಾದಿಕ್ ಖಾನ್ ಲಂಡನ್ ನಗರದ ಮೊದಲ ಮುಸ್ಲಿಂ ಮೇಯರ್ ಆಗಿ ಆಯ್ಕೆಯಾಗಿರುವುದು ಹಳೆಯ ಸುದ್ದಿ. ಆದರೆ ಅವರು...

Published On :
ಲಂಡನ್: ಪಾಕಿಸ್ತಾನದ ಬಸ್ ಚಾಲಕನ ಮಗನಾದ ಸಾದಿಕ್ ಖಾನ್ ಲಂಡನ್ ನಗರದ ಮೊದಲ ಮುಸ್ಲಿಂ ಮೇಯರ್ ಆಗಿ ಆಯ್ಕೆಯಾಗಿರುವುದು ಹಳೆಯ ಸುದ್ದಿ. ಆದರೆ ಅವರು ಅಧಿಕಾರ ಸ್ವೀಕರಿಸಿದ ಬಳಿಕ ತಮ್ಮ ಅಚ್ಚುಮೆಚ್ಚಿನ ದೇವಾಲಯ ನಿಯಾಸ್ಡೆನ್ನಲ್ಲಿರುವ ಶ್ರೀ ಸ್ವಾಮಿ ನಾರಾಯಣ ಮಂದಿರಕ್ಕೆ ಭೇಟಿ ನೀಡಿರುವ ಚಿತ್ರ ಇದೀಗ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.
ಸಾದಿಕ್ ಅವರು ಇಂದು ಸ್ವಾಮಿ ನಾರಾಯಣ ದೇವಾಲಯಕ್ಕೆ ಭೇಟಿ ನೀಡಿ, ಹಿಂದೂ ಸಂಪ್ರದಾಯದಂತೆ ಪೂಜಾ ವಿಧಿವಿಧಾನಗಳನ್ನು ಪೂರೈಸುವ ಮೂಲಕ ತಮ್ಮ ಕಾರ್ಯ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯಕ್ಕೆ ಆಗಮಿಸಿದ ಭಕ್ತಾಧಿಗಳ ಬಳಿ ಕುಶಲೋಪರಿ ವಿಚಾರಿಸಿದ್ದಾರೆ.
ಹಿಂದೂ ದೇವಾಲಯ ಭೇಟಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿರುವ ಸಾದಿಕ್ ಅವರು, ನನ್ನ ನೆಚ್ಚಿನ ದೇವಾಲಯಕ್ಕೆ ವಾರಾಂತ್ಯದಲ್ಲಿ ಭೇಟಿ ನೀಡಿರುವುದು ಮನಸ್ಸಿಗೆ ಅತೀವ ಆನಂದ ನೀಡಿದೆ. ಲಂಡನ್ ಭಾರತೀಯರ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸಿ, ಭಾರತದೊಂದಿಗಿನ ಸಂಬಂಧವನ್ನು ಇನ್ನಷ್ಟು ಬಲಿಷ್ಠಗೊಳಿಸುವುದು ನನ್ನ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಭಾರತದೊಂದಿಗಿನ ವ್ಯಾಪಾರ ವಹಿವಾಟು ಅಧಿಕವಾಗಿಲಿದೆ ಎಂದು ಹೇಳಿದ್ದಾರೆ.
ಮೇಯರ್ ಆಗಿ ನನ್ನ ಮೊದಲ ಆದ್ಯತೆ ಲಂಡನ್ ಜನತೆಗೆ ಸೂಕ್ತವಾದ ಭದ್ರತೆ ಒದಗಿಸುವುದು ಹಾಗೂ ಭಯೋತ್ಪಾದನೆ ಚಟುವಟಿಕೆಗಳನ್ನು ನಿರ್ಮೂಲನೆ ಮಾಡುವುದಾಗಿದೆ. ಹಾಗೇ ನಗರದಲ್ಲಿನ ಉದ್ಯಮಗಳ ಬೆಳವಣಿಗೆ ಜತೆಗೆ ಸಂಶೋಧನೆಗಳಿಗೆ ಹೆಚ್ಚಿನ ಗಮನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


