ಗಡಿ ವಿವಾದ ಬಗೆಹರಿಸುವ ನಮ್ಮ ಪ್ರಯತ್ನವನ್ನು ಅಮೆರಿಕ ಗೌರವಿಸಬೇಕು: ಚೀನಾ
ಗಡಿ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಚೀನಾ ಮತ್ತು ಭಾರತ ನಡೆಸುತ್ತಿರುವ ಪ್ರಯತ್ನವನ್ನು ಅಮೆರಿಕ ಗೌರವಿಸಬೇಕೆಂದು...

ಬೀಜಿಂಗ್: ಗಡಿ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಚೀನಾ ಮತ್ತು ಭಾರತ ನಡೆಸುತ್ತಿರುವ ಪ್ರಯತ್ನವನ್ನು ಅಮೆರಿಕ ಗೌರವಿಸಬೇಕೆಂದು ಚೀನಾದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ಎರಡೂ ದೇಶಗಳು ಗಡಿ ವಿವಾದವನ್ನು ಬಗೆಹರಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಅವರು ಅಮೆರಿಕಕ್ಕೆ ತಿಳಿಸಿದ್ದಾರೆ.
ಚೀನಾ ಮತ್ತು ಭಾರತದ ಮಧ್ಯೆ ಗಡಿಭಾಗದಲ್ಲಿ ಶಾಂತಿ, ಸೌಹಾರ್ದತೆಯನ್ನು ರಕ್ಷಿಸಲು ಚೀನಾ ಬದ್ಧವಾಗಿದೆ ಹಾಗೂ ಗಡಿ ಸಮಸ್ಯೆಯನ್ನು ಭಾರತದೊಂದಿಗೆ ಸಂಧಾನದ ಮೂಲಕ ಬಗೆಹರಿಸಲು ಒಲವು ತೋರಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಲಿಖಿತ ಪ್ರತಿಕ್ರಿಯೆಯಲ್ಲಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಚೀನಾ ತನ್ನ ಸೇನಾ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುತ್ತಿರುವುದರ ಜೊತೆಗೆ, ಭಾರತದ ಗಡಿಯಲ್ಲಿ ತನ್ನ ಸೇನಾ ಜಮಾವಣೆಯನ್ನು ಹೆಚ್ಚಿಸಿದೆ. ಅಲ್ಲದೆ ವಿಶ್ವದ ಹಲವು ಭಾಗಗಳಲ್ಲಿ ಅದರಲ್ಲೂ ಪಾಕಿಸ್ತಾನದಲ್ಲಿ ಚೀನಾ ಸೇನೆಯ ತನ್ನ ಇರುವಿಕೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದೆ ಎಂದು ಅಮೆರಿಕ ಕಳೆದ ಶನಿವಾರ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಚೀನಾ ಈ ಪ್ರತಿಕ್ರಿಯೆ ನೀಡಿದೆ.
ಚೀನಾ ಮತ್ತು ಭಾರತ ಗಡಿ ವಿವಾದ ವಿಷಯವನ್ನು ಬಗೆಹರಿಸುವ ಸಾಮರ್ಥ್ಯ ಹೊಂದಿವೆ. ಎರಡೂ ರಾಷ್ಟ್ರಗಳು ಗಡಿ ವಿವಾದವನ್ನು ಬಗೆಹರಿಸಲು ಮಾಡುತ್ತಿರುವ ಪ್ರಯತ್ನವನ್ನು ಗೌರವಿಸಬೇಕೆ ಹೊರತು ವಿರೋಧಿಸಬಾರದು ಎಂದು ಅಮೆರಿಕವನ್ನುದ್ದೇಶಿಸಿ ಚೀನಾ ಇಂದು ಪ್ರತಿಕ್ರಿಯೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


