ವಿದೇಶ

ಜಪಾನ್ ನಲ್ಲಿ ಪ್ರಬಲ ಭೂಕಂಪನ; ರಿಕ್ಟರ್ ಮಾಪಕದಲ್ಲಿ 5.6ರಷ್ಟು ತೀವ್ರತೆ ದಾಖಲು

ಜಪಾನ್ ನಲ್ಲಿ ಸೋಮವಾರ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6ರಷ್ಟು ತೀವ್ರತೆ ದಾಖಲಾಗಿದೆ...

ಜಪಾನ್ ನಲ್ಲಿ ಪ್ರಬಲ ಭೂಕಂಪನ; ರಿಕ್ಟರ್ ಮಾಪಕದಲ್ಲಿ 5.6ರಷ್ಟು ತೀವ್ರತೆ ದಾಖಲು
ಜಪಾನ್ ನಲ್ಲಿ ಪ್ರಬಲ ಭೂಕಂಪನ
Published On :

ಟೋಕಿಯೋ: ಜಪಾನ್ ನಲ್ಲಿ ಸೋಮವಾರ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6ರಷ್ಟು ತೀವ್ರತೆ ದಾಖಲಾಗಿದೆ.

ಭೂಮಿ ಕಂಪಿಸುತ್ತಿದ್ದಂತೆಯೇ ಆತಂಕದಿಂದ ಜನರು ಕಟ್ಟಡಗಳಿಂದ ಹೊರಗೆ ಓಡಿ ಬಂದರು. ಪ್ರಬಲ ಭೂಕಂಪನದಿಂದಾಗಿ ಜಪಾನ್ ನ ಕಾಂಟೋ ಪ್ರಾಂತ್ಯದ ಹಲವು ಕಟ್ಟಡಗಳಿಗೆ  ಹಾನಿಯಾಗಿದೆ. ಇನ್ನು ಪ್ರಬಲ ಭೂಕಂಪನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಅಧಿಕಾರಿಗಳು ಭೂಕಂಪನದಿಂದ ಸುನಾಮಿ ಭೀತಿ ಇಲ್ಲ ಎಂದು ಹೇಳಿದ್ದಾರೆ.

ಜಪಾನ್ ಸ್ಥಳೀಯ ಕಾಲಮಾನ ರಾತ್ರಿ 9.23ರ ವೇಳೆಯಲ್ಲಿ ಭೂಮಿ ಸುಮಾರು 5 ಸೆಕೆಂಡ್ ಗಳ ಕಾಲ ಭೂಮಿ ನಡುಗಿದೆ ಎಂದು ತಿಳಿದುಬಂದಿದೆ. ಜಪಾನ್ ನ ಕಾಂಟೋ ಪಾಂತ್ಯದ ಇಬರಾಕಿ  ಪ್ರದೇಶ ಭೂಕಂಪನದ ಕೇಂದ್ರ ಬಿಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬರಾಕಿಯ ಸುಮಾರು 40 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದ್ದು, ಕಂಪನ ಭೂಮಿ ಆಳದಲ್ಲಿಯಾದ್ದರಿಂದ ಹೆಚ್ಚಿನ  ಅನಾಹುತಗಳಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಂತೆಯೇ ಸುನಾಮಿ ಭೀತಿ ಇಲ್ಲ ಎಂದು ತಿಳಿಸಿರುವ ಅಧಿಕಾರಿಗಳು, ಅಲ್ಪ ಪ್ರಮಾಣದ ಸರಣಿ ಕಂಪನಗಳು ಸಂಭವಿಸಬಹುದು ಎಂದು ಹೇಳಿದ್ದಾರೆ. ಜಪಾನ್ ನಲ್ಲಿ 2011ರ ಮಾರ್ಚ್ ನಲ್ಲಿ  ಪ್ರಬಲ ಭೂಕಂಪನ ಹಾಗೂ ಸುನಾಮಿ ಸಂಭವಿಸಿತ್ತು. ಈ ಭೀಕರ ಘಟನೆಯಲ್ಲಿ ಸುಮಾರು 18,500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಲೆಕ್ಕವಿಲ್ಲದ್ದಷ್ಟು ಜನರು ನಾಪತ್ತೆಯಾಗಿದ್ದರು. ಭೂಮಿಯ 4  ಟೊಕ್ಟೋನಿಕ್ ಪ್ಲೇಟನ್ನು ಜಂಕ್ಷನ್ ನಲ್ಲಿ ಜಪಾನ್ ಇರುವುದರಿಂದ ಜಗತ್ತಿನ ಪ್ರಬಲ ಭೂಕಂಪನ ಶೇ.20 ರಷ್ಟು ಭಾಗದ ಭೂಕಂಪನ ಜಪಾನ್ ನಲ್ಲೇ ಸಂಭವಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.