ಹಲ್ಲೆ ಖಂಡಿಸಿ ದೆಹಲಿಯಲ್ಲಿ ಆಫ್ರಿಕಾ ವಿದ್ಯಾರ್ಥಿಗಳ ಪ್ರತಿಭಟನೆ
ಭಾರತದಲ್ಲಿ ತಮ್ಮ ಜನಾಂಗದವರ ಮೇಲೆ ದಾಳಿ ಹೆಚ್ಚಾಗುತ್ತಿರುವುದನ್ನು ಖಂಡಿಸಿ ಆಫ್ರಿಕಾ ವಿದ್ಯಾರ್ಥಿಗಳು...

Published On :
ನವದೆಹಲಿ: ಭಾರತದಲ್ಲಿ ತಮ್ಮ ಜನಾಂಗದವರ ಮೇಲೆ ದಾಳಿ ಹೆಚ್ಚಾಗುತ್ತಿರುವುದನ್ನು ಖಂಡಿಸಿ ಆಫ್ರಿಕಾ ವಿದ್ಯಾರ್ಥಿಗಳು ಸೋಮವಾರ ದೆಹಲಿಯ ಜಂತರ್ ಮಂತರ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಆಫ್ರಿಕಾ ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ಹಲ್ಲೆ ಮಾಡಲಾಗುತ್ತಿದೆ. ಭಾರತ ಸರ್ಕಾರ ಈ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಆಫ್ರಿಕಾ ಪ್ರಜೆಗಳಿಗೆ ಸೂಕ್ತ ಭದ್ರತೆ ಒದಗಿಸಿ, ಮತ್ತೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಇತ್ತೀಚೆಗೆ ಆಫ್ರಿಕಾ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಲಾಗಿತ್ತು. ಘಟನೆಯನ್ನು ಖಂಡಿಸಿ ಆಫ್ರಿಕಾ ಪ್ರಜೆಗಳು ಪ್ರತಿಭಟನೆ ನಡೆಸಿದ್ದಾರೆ.
ಮೇ 20ರಂದು ದೆಹಲಿಯಲ್ಲಿ ಆಫ್ರಿಕಾ ಪ್ರಜೆ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ಮಾಡಿದ್ದರು. ಮೇ 25ರಂದು ಹೈದ್ರಾಬಾದ್ ನಲ್ಲಿ ನೈಜೀರಿಯನ್ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಲಾಗಿತ್ತು. ತದ ನಂತರ ಮೇ.28ರಂದು ಆಫ್ರಿಕಾ ಪ್ರಜೆಗಳ ಮೇಲೆ ಹಲ್ಲೆ ನಡೆಸಿದ ನಾಲ್ಕು ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಈ ಹಿನ್ನಲೆಯಲ್ಲಿ ಆಫ್ರಿಕಾ ವಿದ್ಯಾರ್ಥಿಗಳು ಸೂಕ್ತ ಭದ್ರತೆ ಕೋರಿ ಪ್ರತಿಭಟನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


