ಅಧಿಕಾರ ವಹಿಸಿಕೊಂಡ ಮೊದಲ ವರ್ಷದಲ್ಲೇ ಪ್ರಧಾನಿ ಮೋದಿಗೆ ಆಹ್ವಾನ ನೀಡಿ: ಟ್ರಂಪ್ ಗೆ ಸಲಹಾ ಸಮಿತಿ ಸಲಹೆ!
ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದು, ಅಧಿಕಾರ ವಹಿಸಿಕೊಂಡ ಒಂದು ವರ್ಷದ ಒಳಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕಾಗೆ ಆಹ್ವಾನಿಸಬೇಕು ಎಂದು ಅಲ್ಲಿನ ವ್ಯಾಪಾರ ಸಲಹಾ ಸಮಿತಿ

Published On :
ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾಗಿದ್ದು, ಅಧಿಕಾರ ವಹಿಸಿಕೊಂಡ ಒಂದು ವರ್ಷದ ಒಳಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕಾಗೆ ಆಹ್ವಾನಿಸಬೇಕು ಎಂದು ಅಲ್ಲಿನ ವ್ಯಾಪಾರ ಸಲಹಾ ಸಮಿತಿ ಹೇಳಿದೆ.
ಅಭಿನಂದನೆ ಸಲ್ಲಿಸಿ ಡೊನಾಲ್ಡ್ ಟ್ರಂಪ್ ಗೆ ಯುಎಸ್ ಇಂಡಿಯಾ ಬ್ಯುಸಿನೆಸ್ ಕೌನ್ಸಿಲ್(ಯುಎಸ್ಐಬಿಸಿ) ಪತ್ರ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕಾಗೆ ಭೇಟಿ ನೀಡುವಂತೆ ಆಹ್ವಾನಿಸಬೇಕು ಎಂದು ಒತ್ತಾಯಿಸಿದೆ. "ಅಧಿಕಾರ ವಹಿಸಿಕೊಂಡ ಒಂದು ವರ್ಷದಲ್ಲಿ, ಭಾರತದ ಪ್ರಧಾನಿ ಮೋದಿ ಅವರನ್ನು ಅಮೆರಿಕಾಗೆ ಆಹ್ವಾನಿಸಿ, ಇದು ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಪ್ರಮುಖವಾದ ಸೂಚನೆಯಾಗಿರಲಿದೆ ಎಂದು ಯುಎಸ್ಐಬಿಸಿ ಅಧ್ಯಕ್ಷ ಮುಖೇಶ್ ಆಘಿ ಟ್ರಂಪ್ ಗೆ ಸಲಹೆ ನೀಡಿದ್ದಾರೆ.
ಭಾರತ- ಅಮೆರಿಕದ ನಡುವೆ ವಾಣಿಜ್ಯ ವಹಿವಾಟುಗಳನ್ನು ವಿಸ್ತರಿಸಲು ಡೋನಾಲ್ಡ್ ಟ್ರಂಪ್ ಆಡಳಿತ ಗಮನಹರಿಸಬೇಕು ಮೊದಲ ಕೆಲವು ತಿಂಗಳಲ್ಲೇ ಸರ್ಕಾರಗಳೊಂದಿಗಿನ ನಿರಂತರ ಸಂಪರ್ಕ, ದ್ವಿಪಕ್ಷೀಯ ಹೂಡಿಕೆ ಬಗ್ಗೆ ಮಾತುಕತೆ ನಡೆಸಬೇಕು ಎಂದು ಯುಎಸ್ಐಬಿಸಿ ಅಭಿಪ್ರಾಯಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


