ಅಮೆರಿಕಾದೊಂದಿಗೆ ಜಗಳ ಬೇಕಿಲ್ಲ ಏಕೆಂದರೆ ಟ್ರಂಪ್ ಅಧ್ಯಕ್ಷರಾಗಿದ್ದಾರೆ: ಫಿಲಿಪೈನ್ಸ್ ಅಧ್ಯಕ್ಷ ರೋಡ್ರಿಗೋ
ಫಿಲಿಪೈನ್ ಅಧ್ಯಕ್ಷ ರೋಡ್ರಿಗೋ ಡೊನಾಲ್ಡ್ ಟ್ರಂಪ್ ಆಯ್ಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಮೆರಿಕದೊಂದಿಗಿನ ಜಗಳವನ್ನು ನಿಲ್ಲಿಸುವ ಪ್ರತಿಜ್ಞೆ ಮಾಡಿದ್ದಾರೆ.

Published On :
ಕೌಲಲಾಂಪುರ್: ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ವಿಶ್ವದ ನಾಯಕರು ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದೇ ವೇಳೆ ಫಿಲಿಪೈನ್ ಅಧ್ಯಕ್ಷ ರೋಡ್ರಿಗೋ ಸಹ ಡ್ಯುಟರ್ಟೆ ಡೊನಾಲ್ಡ್ ಟ್ರಂಪ್ ಆಯ್ಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಅಮೆರಿಕದೊಂದಿಗಿನ ಜಗಳವನ್ನು ನಿಲ್ಲಿಸುವ ಪ್ರತಿಜ್ಞೆ ಮಾಡಿದ್ದಾರೆ.
ಕೌಲಲಾಂಪುರ್ ನಲ್ಲಿರುವ ಫಿಲಿಪೈನ್ ಸಮುದಾಯವನ್ನುದ್ದೇಶಿಸಿ ಮಾತನಾಡಿರುವ ಅಧ್ಯಕ್ಷ ರೋಡ್ರಿಗೋ, " ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಉಭಯ ರಾಷ್ಟ್ರಗಳು ಹಲವು ವಿಷಯಗಳಲ್ಲಿ ಸಮಾನ ಮನಸ್ಕ ರಾಷ್ಟ್ರಗಳಾಗಿವೆ. ಆದ್ದರಿಂದ ಅಮೆರಿಕದೊಂದಿಗಿನ ಜಗಳವನ್ನು ನಿಲ್ಲಿಸುತ್ತೇನೆ, ನನಗೆ ಅಮೆರಿಕಾದೊಂದಿಗೆ ಕಾಳಗ ಬೇಡ ಏಕೆಂದರೆ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ರೋಡ್ರಿಗೋ ಹೇಳಿದ್ದಾರೆ.
2016ರಲ್ಲಿ ನಡೆದ ಫಿಲಿಪೇನ್ಸ್ ಚುನಾವಣೆಯಲ್ಲಿ ರೋಡ್ರಿಗೋ ಅವರನ್ನು ಡೊನಾಲ್ಡ್ ಟ್ರಂಪ್ ಗೆ ಹೋಲಿಸಲಾಗಿತ್ತು ಹಾಗೂ ಟ್ರಂಪ್ ಆಫ್ ಈಸ್ಟ್ ಎಂದೂ ಬಣ್ಣಿಸಲಾಗಿತ್ತು. ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಗುರುತಿಸಿಕೊಳ್ಳದೇ ಇದ್ದರೂ ಸಹ ಫಿಲಿಪೈನ್ಸ್ ಅಧ್ಯಕ್ಷರಾಗಿರುವ ರೋಡ್ರಿಗೋ, ಡೊನಾಲ್ಡ್ ಟ್ರಂಪ್ ಇಬ್ಬರೂ ಅವರ ದೇಶಗಳಿಗೆ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಫಿಲಿಪೈನ್ಸ್ ಅಧ್ಯಕ್ಷ ಅಮೆರಿಕದ ಹಾಲಿ ಅಧ್ಯಕ್ಷ ಬರಾಕ್ ಒಬಾಮ ಅವರ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
USಅಮೆರಿಕಅಧ್ಯಕ್ಷೀಯ ಚುನಾವಣೆಡೊನಾಲ್ಡ್ ಟ್ರಂಪ್Presidential election Donald TrumpPhilippines presidentಫಿಲಿಪೈನ್ಸ್ ಅಧ್ಯಕ್ಷ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


