ವಿದೇಶ

ಭಾರತ ಮೂಲದ ಕಮಲಾ ಹ್ಯಾರಿಸ್‌ಗೆ ಅಮೆರಿಕದ ಮುಂದಿನ ಅಧ್ಯಕ್ಷೆಯಾಗುವ ಸಾಮರ್ಥ್ಯವಿದೆ: ವರದಿ

ಕ್ಯಾಲಿಫೋರ್ನಿಯಾ ಸೆನೆಟರ್ ಮತ್ತು ಅಟಾರ್ನಿ ಜನರಲ್ ಆಗಿ ಆಯ್ಕೆಯಾಗಿರುವ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ...

ಭಾರತ ಮೂಲದ ಕಮಲಾ ಹ್ಯಾರಿಸ್‌ಗೆ ಅಮೆರಿಕದ ಮುಂದಿನ ಅಧ್ಯಕ್ಷೆಯಾಗುವ ಸಾಮರ್ಥ್ಯವಿದೆ: ವರದಿ
ಕಮಲಾ ಹ್ಯಾರಿಸ್
Published On :
ವಾಷಿಂಗ್ಟನ್: ಕ್ಯಾಲಿಫೋರ್ನಿಯಾ ಸೆನೆಟರ್ ಮತ್ತು ಅಟಾರ್ನಿ ಜನರಲ್ ಆಗಿ ಆಯ್ಕೆಯಾಗಿರುವ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗುವ ಸಾಮರ್ಥ್ಯವಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ. 
ಡೆಮೊಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಡೊನಾಲ್ಡ್ ಟ್ರಂಪ್ ವಿರುದ್ಧ ಸೋಲು ಕಂಡಿರುವ ಹಿಲರಿ ಕ್ಲಿಂಟನ್ ಗಿಂತಲೂ ಹೆಚ್ಚು ಪ್ರಭಾವಶಾಲಿಯಾಗಿ ಹೊರಹೊಮ್ಮಿರುವ ಕಮಲಾ ಹ್ಯಾರಿಸ್ ಅಮೆರಿಕದ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗುವುದು ಖಚಿತ ಎಂದು ಮಾಧ್ಯಮಗಳು ವಿಶ್ಲೇಷಿಸಿವೆ. 
ಕ್ಯಾಲಿಫೋರ್ನಿಯಾದಿಂದ ಸೆನೆಟ್ ಸ್ಥಾನಕ್ಕೆ ದಾಖಲೆ ಗೆಲುವಿನೊಂದಿಗೆ ಜಯಭೇರಿ ಸಾಧಿಸಿರುವ ಕಮಲಾ ಹ್ಯಾರಿಸ್ ಜನಪ್ರಿಯತೆಯ ಉತ್ತುಂಗದಲ್ಲಿದ್ದಾರೆ. ಇದೀಗ ಹೀಗೆ ಮುಂದುವರೆದರೆ 2020ರ ವೇಳೆಗೆ ಕಮಲಾ ಅಮೆರಿಕದ ಅಧ್ಯಕ್ಷೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ದಿ ಹಫಿಂಗ್ಟನ್ ಪೋಸ್ಟ್ ಹೇಳಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.