ಪುಟಿನ್ ಜೊತೆ ಟ್ರಂಪ್ ದೂರವಾಣಿ ಮಾತುಕತೆ: ಭಯೋತ್ಪಾದನೆ, ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಬಗ್ಗೆ ಚರ್ಚೆ
ಅಮೆರಿಕ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಟ್ರಂಪ್ ಮೊದಲ ಬಾರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ಶೀಘ್ರವೇ ಪರಸ್ಪರ ಭೇಟಿಯನ್ನು ನಿಗದಿಪಡಿಸಲು...

Published On :
ಮಾಸ್ಕೋ: ಅಮೆರಿಕ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ಶೀಘ್ರವೇ ಪರಸ್ಪರ ಭೇಟಿಯನ್ನು ನಿಗದಿಪಡಿಸಲು ಅಧಿಕಾರಿಗಳಿಗೆ ಸೂಚಿಸಲು ಒಪ್ಪಿಗೆ ಸೂಚಿಸಿದ್ದಾರೆ.
ಡೊನಾಲ್ಡ್ ಟ್ರಂಪ್- ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಡುವಿನ ದೂರವಾಣಿ ಸಂಭಾಷಣೆ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ರಷ್ಯಾ ಸರ್ಕಾರ ಉಭಯ ನಾಯಕರು ಶೀಘ್ರವೇ ಭೇಟಿ ಮಾಡಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದೆ. ಉಭಯ ನಾಯಕರು ಅಮೆರಿಕ-ರಷ್ಯಾ ದ್ವಿಪಕ್ಷೀಯ ಸಂಬಂಧದ ಬಗ್ಗೆ ಪ್ರಧಾನವಾಗಿ ಮಾತನಾಡಿದ್ದಾರೆ.
ಅಮೆರಿಕ-ರಷ್ಯಾ ನಡುವೆ ಸಂಪೂರ್ಣ ಅತೃಪ್ತಿಕರ ದ್ವಿಪಕ್ಷೀಯ ಸಂಬಂಧ ಇರುವುದನ್ನು ಪುಟಿನ್- ಟ್ರಂಪ್ ಇಬ್ಬರೂ ಒಪ್ಪಿಕೊಂಡಿದ್ದು ದ್ವಿಪಕ್ಷೀಯ ಬಾಂಧವ್ಯವನ್ನು ಸಹಜಸ್ಥಿತಿಗೆ ತರುವ ನಿಟ್ಟಿನಲ್ಲಿ ಕಾರ್ಯನಿರತರಾಗಲು ಇಬ್ಬರೂ ಒಪ್ಪಿಗೆ ಸೂಚಿಸಿದ್ದಾರೆ ಎಂದು ರಷ್ಯಾ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಮಾನ ವೈರಿಯಾಗಿರುವ ಭಯೋತ್ಪಾದನೆ ವಿರುದ್ಧದ ಹೋರಾಟದ ಬಗ್ಗೆ ಟ್ರಂಪ್- ಪುಟಿನ್ ಚರ್ಚೆ ನಡೆಸಿದ್ದು, ಸಿರಿಯಾ ಅಸ್ಥಿರತೆಯನ್ನು ಅಂತ್ಯಗೊಳಿಸುವ ಬಗ್ಗೆಯೂ ಅಮೆರಿಕ ನಿಯೋಜಿತ ಅಧ್ಯಕ್ಷ- ರಷ್ಯಾ ಅಧ್ಯಕ್ಷರು ಮಾತನಾಡಿದ್ದಾರೆ ಎಂದು ರಷ್ಯಾ ಸರ್ಕಾರ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
tiesದೂರವಾಣಿ ಕರೆDonald Trumpಡೊನಾಲ್ಡ್ ಟ್ರಂಪ್Russian President Vladimir Putintelephone conversationರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


