ವಿದೇಶ

ಭಾರತೀಯ ಮೂಲದ ಉದ್ಯಮ ಪಾಲುದಾರರನ್ನು ಭೇಟಿ ಮಾಡಿದ ಟ್ರಂಪ್: ಮೋದಿ ಕಾರ್ಯವೈಖರಿಯ ಹೊಗಳಿಕೆ

ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿರುವ ಡೊನಾಲ್ಡ್ ಟ್ರಂಪ್ ಭಾರತೀಯ ಮೂಲದ ಉದ್ಯಮ ಪಾಲುದಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸಗಳನ್ನು ಹೊಗಳಿದ್ದಾರೆ.

ಭಾರತೀಯ ಮೂಲದ ಉದ್ಯಮ ಪಾಲುದಾರರನ್ನು ಭೇಟಿ ಮಾಡಿದ ಟ್ರಂಪ್: ಮೋದಿ ಕಾರ್ಯವೈಖರಿಯ ಹೊಗಳಿಕೆ
ಡೊನಾಲ್ಡ್ ಟ್ರಂಪ್
Published On :
ಮುಂಬೈ: ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿರುವ ಡೊನಾಲ್ಡ್ ಟ್ರಂಪ್ ಭಾರತೀಯ ಮೂಲದ ಉದ್ಯಮ ಪಾಲುದಾರರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸಗಳನ್ನು ಹೊಗಳಿದ್ದಾರೆ. 
ಡೊನಾಲ್ಡ್ ಟ್ರಂಪ್ ಭಾರತೀಯ ಮೂಲದ ಉದ್ಯಮ ಪಾಲುದಾರರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸಗಳನ್ನು ಮೆಚ್ಚಿ ಹೊಗಳಿದರು. ಪ್ರಧಾನಿ ನರೇಂದ್ರ ಮೋದಿ ಅದ್ಭುತ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾಗಿ ಪಂಚಶೀಲ ರಿಯಾಲ್ಟಿ ಎಂಬ ಸಂಸ್ಥೆಯ ನಿರ್ದೇಶಕ ಸಾಗರ್ ಚೋರ್ಡಿಯಾ ತಿಳಿಸಿದ್ದಾರೆ. 
ಭಾರತೀಯ ಮೂಲದ ಸಾಗರ್ ಚೋರ್ಡಿಯಾ, ಅತುಲ್ ಚೋರ್ಡಿಯಾ, ಕಪಿಲೇಶ್ ಮೆಹ್ತ ಅವರನ್ನು ಭೇಟಿ ಮಾಡಿರುವ ಡೊನಾಲ್ಡ್ ಟ್ರಂಪ್, ಭಾರತ- ಅಮೆರಿಕದ ದ್ವಿಪಕ್ಷೀಯ ಬಾಂಧವ್ಯವವನ್ನು ವಿಸ್ತರಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭೇಟಿಯ ವೇಳೆ ಭಾರತದ ಆರ್ಥಿಕತೆ ಹಾಗೂ ಪ್ರಧಾನಿ ನರೆಂದ್ರ ಮೋದಿ ಬಗ್ಗೆ ಚರ್ಚೆ ನಡೆದಿದೆ. 
ಪುಣೆಯಲ್ಲಿ ಟ್ರಂಪ್ ಟವರ್(46- ಅಪಾರ್ಟ್ ಮೆಂಟ್ ಬ್ಲಾಕ್) ಸೇರಿದಂತೆ ಭಾರತದಲ್ಲಿ ಡೊನಾಲ್ಡ್ ಟ್ರಂಪ್ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಇದಕ್ಕೂ ಮುನ್ನ ಲೋಕಸಭಾ ಸ್ಪೀಕರ್ ಹಾಗೂ ಸಂಸತ್ ನ ಸದಸ್ಯರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ತಾವು ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದಾಗಿ ಹೇಳಿದ್ದರು. 
ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಮುನ್ನ 2014 ರಲ್ಲಿ ಎಕಾನಾಮಿಕ್ ಟೈಮ್ಸ್ ನೊಂದಿಗೆ ಮಾತನಾಡುತ್ತಾ, ಭಾರತವನ್ನು ಹೊಗಳಿದ್ದರು. ಅಷ್ಟೇ ಅಲ್ಲದೇ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಭಾರತದ ಬಗ್ಗೆ ಇದ್ದ ದೃಷ್ಟಿಕೋನವೇ ಬದಲಾಗುತ್ತಿದೆ ಎಂದು ಹೇಳಿದ್ದರು ಎಂದು ಕಪಿಲೇಶ್ ಮೆಹ್ತ ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.