ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮೈಕೆಲ್ ಫ್ಲಿನ್ ಆಯ್ಕೆ
ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿವೃತ್ತ ಸೇನಾಧಿಕಾರಿ ಮೈಕೆಲ್ ಫ್ಲಿನ್ ಅವರನ್ನು ತಮ್ಮ ಸಲಹೆಗಾರರಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಿವೃತ್ತ ಸೇನಾಧಿಕಾರಿ ಮೈಕೆಲ್ ಫ್ಲಿನ್ ಅವರನ್ನು ತಮ್ಮ ಸಲಹೆಗಾರರಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯನ್ನು ಬಹಿರಂಗವಾಗಿಯೇ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದ ಮೈಕೆಲ್ ಫ್ಲಿನ್ ಅವರನ್ನು ತಮ್ಮ ಸಲಹೆಗಾರರಾಗಿ ನೇಮಕ ಮಾಡುವ ಮೂಲಕ ಟ್ರಂಪ್ ಅಚ್ಚರಿ ಮೂಡಿಸಿದ್ದಾರೆ. ಒಂದು ಕಾಲದಲ್ಲಿ ಇಸ್ಲಾಮಿಕ್ ಸಿದ್ಧಾಂತವನ್ನು ಬಹಿರಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕಠೋರವಾಗಿ ಟೀಕಿಸಿ (ಕು)ಖ್ಯಾತಿಗಳಿಸಿದ್ದ ಲೆಫ್ಟಿನೆಂಟ್ ಜನರಲ್ ಮೈಕೆಲ್ ಫ್ಲಿನ್ ಅವರಿಗೆ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಆಯ್ಕೆ ಮಾಡಿದ್ದಾರೆ.
ಆದರೆ ಮೈಕೆಲ್ ಫ್ಲಿನ್ ಅವರ ನೇಮಕಕ್ಕೆ ಸೆನೆಟ್ ಅನುಮೋದನೆ ದೊರೆತಿಲ್ಲ. ಶೀಘ್ರದಲ್ಲೇ ಸೆನೆಟ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.
ಇನ್ನು ಲೆಫ್ಟಿನೆಂಟ್ ಜನರಲ್ ಮೈಕೆಲ್ ಫ್ಲಿನ್ ಅವರ ಹಿನ್ನಲೆ ಗಮನಿಸಿದರೆ, ಈ ಹಿಂದೆ ಆಫ್ಘಾನಿಸ್ತಾನ ಹಾಗೂ ಇರಾಕ್ ನಲ್ಲಿ ಉಗ್ರರನ್ನು ಮಟ್ಟಹಾಕುವಲ್ಲಿ ಫ್ಲಿನ್ ಮಹತ್ತರ ಪಾತ್ರ ನಿರ್ವಹಿಸಿದ್ದರು. ಇದೇ ಸಂದರ್ಭದಲ್ಲೇ ಪಾಕಿಸ್ತಾನದ ವಿರುದ್ಧ ಬಹಿರಂಗವಾಗಿಯೇ ಗುಡುಗಿದ್ದ ಫ್ಲಿನ್, ಪಾಕಿಸ್ತಾನ ಭಯೋತ್ಪಾದನೆಯ ಪ್ರಾಯೋಜಕತ್ವವನ್ನು ನಿಲ್ಲಿಸದಿದ್ದರೆ, ಆ ದೇಶಕ್ಕೆ ನೀಡಲಾಗುತ್ತಿರುವ ಆರ್ಥಿಕ ನೆರವನ್ನು ಕೂಡಲೇ ನಿಲ್ಲಿಸಬೇಕು ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದರು. ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಅವರನ್ನು ಫ್ಲಿನ್ ಬಹಿರಂಗವಾಗಿ ಬೆಂಬಲಿಸಿದ್ದಲ್ಲದೇ, ಟ್ರಂಪ್ ಅಧ್ಯಕ್ಷಗಾದಿಗೆ ಸ್ಪರ್ಧಿಸುವುದು ಖಚಿತವಾದ ಬಳಿಕ ಫ್ಲಿನ್ ಅವರಿಗೆ ಮಿಲಿಟರಿ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


