ವಿದೇಶ

ಚೀನಾದಲ್ಲಿ ನಿರ್ಮಾಣ ಹಂತದ ವಿದ್ಯುತ್ ಘಟಕ ಕುಸಿತ: 67ಕ್ಕೇರಿದ ಸಾವಿನ ಸಂಖ್ಯೆ

ನಿರ್ಮಾಣ ಹಂತದಲ್ಲಿದ್ದ ವಿದ್ಯುತ್ ಘಟಕವೊಂದರ ಒಂದು ಭಾಗ ಕುಸಿದು ಬಿದ್ದ ಪರಿಣಾಮ 67 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಚೀನಾದಲ್ಲಿ ಸಂಭವಿಸಿದೆ...

ಚೀನಾದಲ್ಲಿ ನಿರ್ಮಾಣ ಹಂತದ ವಿದ್ಯುತ್ ಘಟಕ ಕುಸಿತ: 67ಕ್ಕೇರಿದ ಸಾವಿನ ಸಂಖ್ಯೆ
ಚೀನಾ ವಿದ್ಯುತ್ ಘಟಕ ದುರಂತ
Published On :

ಬೀಜಿಂಗ್: ನಿರ್ಮಾಣ ಹಂತದಲ್ಲಿದ್ದ ವಿದ್ಯುತ್ ಘಟಕವೊಂದರ ಒಂದು ಭಾಗ ಕುಸಿದು ಬಿದ್ದ ಪರಿಣಾಮ 67 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಚೀನಾದಲ್ಲಿ ಸಂಭವಿಸಿದೆ.

ಚೀನಾದ ಕೇಂದ್ರ ಪ್ರಾಂತ್ಯ ಜಿಯಾಂಗ್ಸಿಯಲ್ಲಿನ ಫೆಂಗ್ ಶೆಂಗ್ ನಲ್ಲಿ ನಿರ್ಮಾಣದ ಹಂತದಲ್ಲಿದ್ದ ವಿದ್ಯುತ್ ಘಟಕದ ಕೂಲಿಂಗ್ ಟವರ್ ವೇದಿಕೆಯು ಬೆಳಗ್ಗೆ ಕುಸಿದು ಬಿದ್ದಿದೆ. ಆ ವೇಳೆ ಅದರ ಕೆಳಗೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು ಸದ್ಯ 67 ಮಂದಿ ಸಾವನ್ನಪ್ಪಿರುವುದಾಗಿ ಚೀನಾದ ಅಧಿಕೃತ ಸುದ್ದಿಸಂಸ್ಥೆ ಕ್ಸಿನ್ ಹುವಾ ವರದಿ ಮಾಡಿದೆ.

ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು 32 ಅಗ್ನಿಶಾಮಕ ಸಿಬ್ಬಂದಿ ಮತ್ತು 212 ಸೇನಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ದುರಂತದಲ್ಲಿ 67 ಮಂದಿ ಸಾವನ್ನಪ್ಪಿದ್ದು ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.