ಭಾರತದ ಹತ್ತಿ, ತರಕಾರಿಗಳ ಆಮದು ನಿಲ್ಲಿಸಿದ ಪಾಕಿಸ್ತಾನ
ಗಡಿಯಲ್ಲಿ ಎರಡು ದೇಶಗಳ ನಡುವೆ ಉದ್ವಿಗ್ನ ವಾತಾವರಣ ಮುಂದುವರಿದಿರುವ ಕಾರಣ, ಭಾರತದ ಹತ್ತಿ ಸೇರಿದಂತೆ ಕೃಷಿ ಉತ್ಪನ್ನಗಳ ಆಮದನ್ನು ...

ಇಸ್ಲಮಾಬಾದ್: ಗಡಿಯಲ್ಲಿ ಎರಡು ದೇಶಗಳ ನಡುವೆ ಉದ್ವಿಗ್ನ ವಾತಾವರಣ ಮುಂದುವರಿದಿರುವ ಕಾರಣ, ಭಾರತದ ಹತ್ತಿ ಸೇರಿದಂತೆ ಕೃಷಿ ಉತ್ಪನ್ನಗಳ ಆಮದನ್ನು ಪಾಕಿಸ್ತಾನ ನಿಲ್ಲಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಭಾರತದಿಂದ ಬರುವ ಕೃಷಿ ಉತ್ಪನ್ನಗಳು ವಾಘಾ ಗಡಿ ದಾಟಿ ನಂತರ ಕರಾಚಿ ಬಂದರಿಗೆ ಬರಬೇಕು. ಜೊತೆಗೆ ಅಲ್ಲಿಂದ ಅನುಮತಿ ಪಡೆದು ಮುಂದಿನ ಸ್ಥಳಗಳಿಗೆ ಕಳುಹಿಸಬೇಕಾಗುತ್ತದೆ ಎಂದು ಡಾನ್ ವರದಿ ಮಾಡಿದೆ.
ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಲಿಖಿತ ಆದೇಶವಿಲ್ಲದೇ ಭಾರತದಿಂದ ಕೃಷಿ ಪದಾರ್ಥಗಳ ಆಮದು ಸಾಧ್ಯವಿಲ್ಲ, ಹೀಗಾಗಿ ಭಾರತದ ಕೃಷಿ ಉತ್ಪನ್ನಗಳ ಆಮದನ್ನು ನಿಲ್ಲಿಸಲಾಗಿದೆ ಎಂದು ಸಸ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


